ಟ್ರೇಡ್ ಲೈಸೆನ್ಸ್’ಗಾಗಿ ‘ವ್ಯಾಪಾರ’ ತಂತ್ರಾಂಶ ಬಳಕೆ
Tumkurnews
ತುಮಕೂರು: ಪಾಲಿಕೆಯ 35 ವಾರ್ಡುಗಳ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರಿಗೆ ಟ್ರೇಡ್ ಲೈಸೆನ್ಸ್ ಹಾಗೂ ನವೀಕರಣಕ್ಕಾಗಿ ಏಪ್ರಿಲ್ 1 ರಿಂದ ಹೊಸದಾಗಿ ‘ವ್ಯಾಪಾರ’ ಎಂಬ ತಂತ್ರಾಂಶವನ್ನು ಬಳಕೆ ಮಾಡಲಾಗುವುದು ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ತಿಳಿಸಿದ್ದಾರೆ.
ಈ ಹಿಂದೆ ಟ್ರೇಡ್ ಲೈಸೆನ್ಸ್ ನೀಡಲು ಹಾಗೂ ನವೀಕರಣ ಮಾಡಲು ಬಳಸಲಾಗುತ್ತಿದ್ದ ಹಳೆಯ ಓಯಸಿಸ್ ತಂತ್ರಾಂಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಈಗಾಗಲೇ ‘ವ್ಯಾಪಾರ’ ತಂತ್ರಾಂಶವನ್ನು ಬಳಕೆ ಮಾಡಲಾಗುತ್ತಿದೆ.
‘ಹೊಸ ಸಾಫ್ಟ್ವೇರ್ ಬಳಕೆ ಹೇಗೆ?: ಟ್ರೇಡ್ ಲೈಸೆನ್ಸ್ ಪಡೆಯಲು ಹಾಗೂ ನವೀಕರಣ ಮಾಡ ಬಯಸುವವರು http://www.mrc.gov.in ವೆಬ್ ಸೈಟ್ಗೆ ಭೇಟಿ ನೀಡಿ ‘ಸಿಟಿಜನ್ ಆನ್ಲೈನ್ ಸರ್ವೀಸ್’ ವಿಭಾಗವನ್ನು ಕ್ಲಿಕ್ ಮಾಡಿದರೆ ವಿವಿಧ ಸೇವೆಗಳು ತೆರೆದುಕೊಳ್ಳಲಿದೆ. ಅದರಲ್ಲಿ ‘ಅಪ್ಲೈ ಫಾರ್ ಟ್ರೇಡ್ ಲೈಸನ್ಸ್’ ವಿಭಾಗವನ್ನು ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿ ತುಂಬಿ ಟ್ರೇಡ್ ಲೈಸನ್ಸ್ ಪಡೆದುಕೊಳ್ಳಬಹುದು. ಈ ತಂತ್ರಾಂಶದ ಮೂಲಕವೇ ಟ್ರೇಡ್ ಲೈಸೆನ್ಸ್ ಶುಲ್ಕವನ್ನು ಸಹ ಪಾವತಿ ಮಾಡಬಹುದು. ವರ್ತಕರು ಸಲ್ಲಿಸಿದ ಅರ್ಜಿಯು ಪ್ರಸ್ತುತ ಯಾವ ಹಂತದಲ್ಲಿ ಇದೆ ಎಂಬುದನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದು. ಪರವಾನಗಿಯನ್ನು ಆನ್ಲೈನ್ನಲ್ಲಿಯೇ ಡೌನ್ ಲೋಡ್ ಮಾಡಿಕೊಳ್ಳಬಹುದು. ಈ ಹಿಂದೆ ಹಲವು ಹಂತದ ಪರಿಶೀಲನೆ ನಡೆಯುತಿತ್ತು. ಆದರೆ ಹೊಸ ತಂತ್ರಾಂಶದಲ್ಲಿ ಎರಡು ಹಂತದ ಪರಿಶೀಲನೆ ಮಾತ್ರ ನಡೆಯುತ್ತದೆ ಎಂದು ತಿಳಿಸಿದ್ದಾರೆ.
ಕ್ಯಾಲ್ಕುಲೇಟರ್’ನಂತೆ ನಿಮ್ಮ ಮಕ್ಕಳು ಗಣಿತದ ಲೆಕ್ಕಗಳನ್ನು ಬಿಡಿಸಲು ಕಲಿಯಬೇಕೆ? ಇಲ್ಲಿದೆ ಸುವರ್ಣಾವಕಾಶ!
+ There are no comments
Add yours