ತುಮಕೂರು: ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಅನುಮತಿ ಇಲ್ಲ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

1 min read

 

ತುಮಕೂರು: ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಅನುಮತಿ ಇಲ್ಲ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

Tumkurnews
ತುಮಕೂರು: ಯುದ್ಧದ ಸಂದರ್ಭದಲ್ಲಿ ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಅನುಮತಿ ನೀಡಲಾಗುವುದಿಲ್ಲ. ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್ ತಿಳಿಸಿದ್ದಾರೆ.

ತುಮಕೂರು: ನಿಷೇಧಾಜ್ಞೆ ಜಾರಿ: ನಿಷೇಧಾಜ್ಞೆ ಉಲ್ಲಂಘಿಸಿದರೆ ಬಂಧನ
ಮದುವೆ, ಮತ್ತಿತರ ಶುಭ ಸಮಾರಂಭಗಳಿಗೆ ಕಡಿಮೆ ಜನರು ಮಾತ್ರ ಸೇರಲು ಅವಕಾಶ ನೀಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಯಬಿಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು. ಯಾವುದೇ ತಪ್ಪು ಸಂದೇಶಗಳು ವಾಟ್ಸ್ ಆಪ್ ಮೂಲಕ ಹಂಚಿಕೊಂಡರೆ ಸದರಿ ಗ್ರೂಪ್ ಅಡ್ಮಿನ್ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತುಮಕೂರು: ಯುದ್ಧ ಭೀತಿ: ಜಿಲ್ಲೆಯಲ್ಲಿ ಹೈ ಅಲರ್ಟ್!: ಜಿಲ್ಲಾಧಿಕಾರಿ ತುರ್ತು ಸುದ್ದಿಗೋಷ್ಠಿ
ಹೆಚ್ಚಿನ ಜನ ಸೇರುವ ಶಾಪಿಂಗ್ ಮಾಲ್, ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಶ್ವಾನದಳ, ಪೊಲೀಸ್ ಸಿಬ್ಬಂದಿಗಳಿಂದ ತಪಾಸಣೆ ನಡೆಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿಯೂ ಎಚ್ಚರಿಕೆವಹಿಸಲಾಗಿದೆ. ಜಿಲ್ಲೆಯಲ್ಲಿ 250 ನಾಕಾಬಂದಿ ಬಿಂದುಗಳನ್ನು ಗುರುತಿಸಲಾಗಿದೆ. ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡು ಬಂದರೆ ಅದನ್ನು ಮುಟ್ಟದೆ ಸಹಾಯ ವಾಣಿ ಸಂಖ್ಯೆ: 112ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಹೇಳಿದರು.
ಸರ್ಕಾರದಿಂದ ಮಾರ್ಗಸೂಚಿಗಳು ಬಂದ ಕೂಡಲೇ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮಾಕ್‌ಡ್ರಿಲ್(ಅಣಕು ಪ್ರದರ್ಶನ) ಮಾಡಲಾಗುವುದು. ಉದ್ವಿಗ್ನ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಜಿಲ್ಲೆಯಲ್ಲಿ ಕೋಮು ಭಾವನೆಯನ್ನು ಕೆರಳಿಸುವ ಗಲಭೆಗಳಿಗೆ ಅವಕಾಶ ನೀಡಬಾರದು. ಯಾವುದೇ ಪ್ರತಿಭಟನೆಗಳಿಗೂ ಅನುಮತಿ ನೀಡಲಾಗುವುದಿಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ಸಂದೇಶ ಬಂದರೆ ಪ್ರತಿಯೊಬ್ಬರ ಅನುಸರಿಸಬೇಕು. ತಪ್ಪಿದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಸಿದರು.

About The Author

You May Also Like

More From Author

+ There are no comments

Add yours