ಅತಿಥಿ ಉಪನ್ಯಾಸಕ, ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

1 min read

 

ಅತಿಥಿ ಉಪನ್ಯಾಸಕ, ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Tumkurnews.in
ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಮತ್ತು ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಅತಿಥಿ ಉಪನ್ಯಾಸಕರ ಹುದ್ದೆ ಹಾಗೂ ಡಾ: ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಮೇ 19ರೊಳಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು-೫೭೨೧೦೨ ಇವರಿಗೆ ಸಲ್ಲಿಸಬಹುದಾಗಿದೆ.

ತುಮಕೂರು: ನಿಷೇಧಾಜ್ಞೆ ಜಾರಿ: ನಿಷೇಧಾಜ್ಞೆ ಉಲ್ಲಂಘಿಸಿದರೆ ಬಂಧನ
ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ, ಸಂಬಂಧಿಸಿದ ಶಾಲಾ-ಕಾಲೇಜುಗಳಿಂದ ಪಡೆಯಬಹುದಾಗಿದೆ. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪದವಿ ಅಂಕಪಟ್ಟಿ, ಮತ್ತಿತರ ವಿದ್ಯಾರ್ಹತೆ ಅಂಕಪಟ್ಟಿ, ಪ್ರಮಾಣ ಪತ್ರ, ಸೇವಾನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ವಾಸಸ್ಥಳ ಪ್ರಮಾಣ ಪತ್ರ, 2 ಭಾವಚಿತ್ರ ಮತ್ತಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2273724(೦೮೧೬-೨೨೭೩೭೨೪)ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಶಬ್ಬೀರ್ ಅಹಮದ್ ತಿಳಿಸಿದ್ದಾರೆ.

ತುಮಕೂರು: ಎ-ಖಾತೆ, ಬಿ-ಖಾತೆ: 3 ತಿಂಗಳ ಕಾಲಾವಧಿ ವಿಸ್ತರಣೆ: ಸಚಿವ ರಹೀಮ್ ಖಾನ್

About The Author

You May Also Like

More From Author

+ There are no comments

Add yours