ತುಮಕೂರು: ಎಸ್ಸೆಸ್ಸೆಲ್ಸಿ, ಐಟಿಐ, ಪಿಯುಸಿ, ಡಿಪ್ಲೊಮಾ, ಪದವೀಧರರಿಗೆ ಉದ್ಯೋಗವಕಾಶ
Tumkurnews
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಕ್ಷಯ ಬಯೋಟೆಕ್, ಟಿ.ವಿ.ಎಸ್. ಎಲೆಕ್ಟ್ರಾನಿಕ್ಸ್ ಹಾಗೂ ಶ್ರೀ ರಾಮ್ ಲೈಫ್ ಇನ್ಸುರೆನ್ಸ್ ಪ್ರೈ.ಲಿಮಿಟೆಡ್ ಸಂಸ್ಥೆಯ ಸಹಯೋಗದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಮೇ 16ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಸಂದರ್ಶನವು ಅಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ. ಡಿಪ್ಲೊಮಾ(ಯಾವುದೇ ಟ್ರೇಡ್) ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ
0816-2278488, ಮೊ.ಸಂ.
9071021143, 9513136642 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ.
+ There are no comments
Add yours