ಕೊರಟಗೆರೆ: ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೊರಟಗೆರೆ ಪಟ್ಟಣ ಪಂಚಾಯತಿಯಲ್ಲಿ ಉದ್ಯೋಗ: ಅರ್ಜಿ ಆಹ್ವಾನ
Tumkurnews
ತುಮಕೂರು: ಕೊರಟಗೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್-2.0 ಯೋಜನೆಯಡಿ ಮಾಹಿತಿ, ಶಿಕ್ಷಣ ಮತ್ತು ಸಂವಹನ(ಐಇಸಿ) ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಗೌರವಧನ ಆಧಾರದ ಮೇಲೆ ಕಮ್ಯುನಿಟಿ ಮೊಬಿಲೈಸರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ-ಡೇ ಯೋಜನೆಯಡಿ ನೋಂದಾಯಿತಗೊಂಡಿರುವ ಸ್ವ-ಸಹಾಯ ಗುಂಪುಗಳ ಸದಸ್ಯರಾಗಿರಬೇಕು. ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು.
ಭರ್ತಿ ಮಾಡಿದ ಅರ್ಜಿಯೊಂದಿಗೆ ಗುರುತಿನ ಪುರಾವೆ, ವಿಳಾಸ ಪುರಾವೆ, ಸ್ವ-ಸಹಾಯ ನೋಂದಣಿ ದಾಖಲೆ, ಶೈಕ್ಷಣಿಕ ಅರ್ಹತಾ ದಾಖಲೆ, ಕಂಪ್ಯೂಟರ್ ಸಿದ್ಧತೆ/ಸಾಕ್ಷರತಾ ಪ್ರಮಾಣಪತ್ರ ದಾಖಲೆಗಳನ್ನು ಲಗತ್ತಿಸಿ ಜೂನ್ 6ರೊಳಗಾಗಿ ಕೊರಟಗೆರೆ ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ
+ There are no comments
Add yours