ತುಮಕೂರು: ನಗರದಲ್ಲಿ ನಿಷೇಧಾಜ್ಞೆ ಜಾರಿ

1 min read

 

ತುಮಕೂರು: ನಗರದಲ್ಲಿ ನಿಷೇಧಾಜ್ಞೆ ಜಾರಿ

ತುಮಕೂರು ನಗರದಲ್ಲಿ ನಿಷೇದಾಜ್ಞೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

Tumkurnews
ತುಮಕೂರು: ಜಿಲ್ಲೆಯ ತುಮಕೂರು ನಗರದಲ್ಲಿ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 2ರಂದು ಕೆ-ಸೆಟ್(K set) ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋ಼ಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆಯು ನವೆಂಬರ್ 2ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ಆಪ್, ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡಲು ಅವಕಾಶವಿರುವುದರಿಂದ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಕ್ಯಾಮರಾ ಇಲ್ಲದೆ ಇರುವ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದೆ. ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ತರುವುದು, ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ಅವರ ವಿರುದ್ಧ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.

About The Author

You May Also Like

More From Author

+ There are no comments

Add yours