ಖಾತೆ ಬದಲಾವಣೆಗೆ ಲಂಚ ಪಡೆಯುತ್ತಿದ್ದ ಗ್ರಾಮಲೆಕ್ಕಿಗ ಮಂಜುನಾಥ್ ಲೋಕಾ ಬಲೆಗೆ
ತುಮಕೂರು: ಖಾತೆ ಬದಲಾವಣೆ ಮಾಡಲು ಲಂಚ ಪಡೆಯುತ್ತಿದ್ದ ಕ್ಯಾತ್ಸಂದ್ರ ಗ್ರಾಮ ಲೆಕ್ಕಿಗ ಮಂಜುನಾಥ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ ಮಾಚನಹಳ್ಳಿ ಗ್ರಾಮದ ವಾಸಿ ಬಿ.ಯೋಗೀಶ್ ಅವರ ತಾತ ಗಂಗಗುಡ್ಡಯ್ಯ ಅವರ ಹೆಸರಿನಲ್ಲಿದ್ದ ಪಿತ್ರಾರ್ಜಿತ ಆಸ್ತಿಯನ್ನು ಯೊಗೀಶ್ ಅವರ ತಂದೆ ಬಸವರಾಜು ಅವರ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಡಲು ಕ್ಯಾತ್ಸಂದ್ರ ಗ್ರಾಮಲೆಕ್ಕಿಗ ಮಂಜುನಾಥ್ 20 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದನು, 10 ಸಾವಿರ ರೂ. ಹಣ ಪಡೆದು ಬಾಕಿ 10 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಕೊಡಲು ಇಷ್ಟಪಡದ ಯೋಗೀಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಮಂಗಳವಾರ ಊರ್ಡಿಗೆರೆ ಹೋಬಳಿ ಕಂದಾಯ ನಿರೀಕ್ಷಕರ ಕಚೇರಿ ಬಳಿ ಯೋಗೀಶ್ ರಿಂದ 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಗ್ರಾಮಲೆಕ್ಕಿಗ ಮಂಜುನಾಥನನ್ನು ವಶಕ್ಕೆ ಪಡೆದಿದ್ದಾರೆ.
ತುಮಕೂರು ಲೋಕಾಯುಕ್ತ ಉಪಾಧೀಕ್ಷಕ ಲಕ್ಷ್ಮೀನಾರಾಯಣ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕ ಡಾ.ಕೆ.ಎಂ.ಸಂತೋಷ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರುಗಳಾದ ಬಿ.ಮೊಹಮ್ಮದ್ ಸಲೀಂ, ಕೆ.ಸುರೇಶ್, ಶಿವರುದ್ರಪ್ಪ ಮೇಟಿ, ಟಿ.ರಾಜು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಚಿತ್ರ:
ಖಾತೆ ಬದಲಾವಣೆಗೆ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮಲೆಕ್ಕಿಗ ಮಂಜುನಾಥ್.




+ There are no comments
Add yours