ತುಮಕೂರಿನಲ್ಲೇ ಕೆಲಸ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Tumkur news
ತುಮಕೂರು: ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಖಾಲಿಯಿರುವ ಕಚೇರಿ ಸಹಾಯಕ, ಅಟೆಂಡರ್ ಹಾಗೂ ವಾಚ್ಮನ್, ಗಾರ್ಡನರ್ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಕಚೇರಿ ಸಹಾಯಕ ಹುದ್ದೆಗೆ BSW/BA/B.Com ಪದವಿ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಮೂಲ ಲೆಕ್ಕ ನಿರ್ವಹಣೆ ಮಾಡುವ ಅರ್ಹತೆ ಹೊಂದಿದ್ದು, ಸ್ಥಳೀಯ ಭಾಷೆಯನ್ನು ಅಡೆತಡೆಯಿಲ್ಲದೆ ಮಾತನಾಡುವಂತಿರಬೇಕು. ವಿದ್ಯಾರ್ಹತೆಗೆ ತಕ್ಕಂತೆ ಹಿಂದಿ, ಇಂಗ್ಲೀಷ್ ಬಲ್ಲವರಾಗಿರಬೇಕು. ಎಂಎಸ್ ಆಫೀಸ್(ವರ್ಡ್ ಮತ್ತು ಎಕ್ಸೆಲ್), ಟ್ಯಾಲಿ, ಇಂಟರ್ನೆಟ್, ಸ್ಥಳೀಯ ಹಾಗೂ ಇಂಗ್ಲೀಷ್ ಭಾಷೆಯ ಬೆರಳಚ್ಚು ತಿಳಿದಿರಬೇಕು. ಬೆರಳಚ್ಚು ಮಾಡುವಲ್ಲಿ ವೇಗವನ್ನು ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ಅಟೆಂಡರ್ ಹುದ್ದೆಗೆ ಎಸ್.ಎಸ್.ಎಲ್.ಸಿ. ಪಾಸಾದ ಕನ್ನಡ ಓದಲು ಮತ್ತು ಬರೆಯಲು ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಾಚ್ಮನ್, ಗಾರ್ಡನರ್ ಹುದ್ದೆಗೆ 7ನೇ ತರಗತಿ ಪಾಸಾಗಿದ್ದು, ಕೃಷಿಯ ಬಗ್ಗೆ ತಿಳುವಳಿಕೆ ಹೊಂದಿರುವ, ಕನ್ನಡ ಓದಲು ಮತ್ತು ಬರೆಯಲು ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಈ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 22 ರಿಂದ 40 ವರ್ಷ ವಯೋಮಾನದವರಾಗಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ತಮ್ಮ ಸ್ವವಿವರ, ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ. ಮತ್ತು ಪದವಿ ಅಂಕಪಟ್ಟಿ ಹಾಗೂ ಭಾವಚಿತ್ರದೊಂದಿಗೆ ಮಾರ್ಚ್ 31ರೊಳಗಾಗಿ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ಪಂಡಿತನಹಳ್ಳಿ ಗೇಟ್, ತುಮಕೂರು-೫೭೨೧೬೮ ಇವರಿಗೆ ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816-2243386 ಅನ್ನು ಸಂಪರ್ಕಿಸಬೇಕೆಂದು ಸಂಸ್ಥೆಯ ನಿರ್ದೇಶಕ ವಾದಿರಾಜ ಕೆ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.