ತುಮಕೂರು: ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು

ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು Tumkur news ಗುಬ್ಬಿ: ರಸ್ತೆ ಬದಿ ಆಟವಾಡುತ್ತಿದ್ದ 13 ವರ್ಷದ ಬಾಲಕನ ಮೇಲೆ ಎಲೆಕ್ಟ್ರಿಕ್ ಕಾರು ಹರಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಗುಬ್ಬಿ ತಾಲ್ಲೂಕು ನಿಟ್ಟೂರಿನಲ್ಲಿ ಘಟನೆ ನಡೆದಿದ್ದು, ರಾಘವೇಂದ್ರ ಟೆಕ್ಸ್ ಟೈಲ್ಸ್ ಜವಳಿ ಅಂಗಡಿ ಮಾಲೀಕರ ಪುತ್ರ ಶೋಭಿತ್ ರಾಘವ್ ಮೃತ ದುರ್ದೈವಿ. ಶಾಲೆಗೆ ರಜೆ ಇದ್ದ ಕಾರಣದಿಂದಾಗಿ ಪೋಷಕರ ಜೊತೆಗೆ ಜವಳಿ ಅಂಗಡಿಗೆ ಬಂದಿದ್ದ ಬಾಲಕ, ಅಂಗಡಿ ಮುಂದೆ ಸೈಕಲ್’ನಲ್ಲಿ […]

Continue Reading

ತುಮಕೂರು: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಸವ ಜಯಂತಿ ಆಚರಣೆ

ಆದರ್ಶ ಸಮಾಜ ನಿರ್ಮಾಣದ ದಾರ್ಶನಿಕ ಬಸವಣ್ಣ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕ್ರಾಂತಿಯೋಗಿಗೆ ಗೌರವ ನಮನ Tumkur news ತುಮಕೂರು: ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಬಸವ ಜಯಂತಿ ಅಂಗವಾಗಿ ಮುಖಂಡರು ಜಗಜ್ಯೋತಿ ಬಸವಣ್ಣ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಬಸವಣ್ಣ ನಾಡಿಗೆ ಕೊಟ್ಟ ಕೊಡುಗೆ ಸ್ಮರಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ ಮಾತನಾಡಿ, ಶ್ರೇಷ್ಠ ವಚನಕಾರ, ವಿಶ್ವಗುರು ಬಸವಣ್ಣನವರು ಸಾರಿದ ತತ್ವಗಳು ಜಾತ್ಯತೀತತೆ, ಕಾಯಕ, ದಾಸೋಹ ಮತ್ತು ಸಮಾನತೆಯ ಆಧಾರದಲ್ಲಿವೆ. ಕಾಯಕವೇ ಕೈಲಾಸ ಎಂದು […]

Continue Reading

ತುಮಕೂರು, ತಿಪಟೂರು, ಶಿರಾ ನಗರದಲ್ಲಿ ಎರಡು ದಿನ ನಿಷೇದಾಜ್ಞೆ: ಜಿಲ್ಲಾಧಿಕಾರಿ

ತುಮಕೂರು, ತಿಪಟೂರು, ಶಿರಾ ನಗರದಲ್ಲಿ ಎರಡು ದಿನ ನಿಷೇದಾಜ್ಞೆ: ಜಿಲ್ಲಾಧಿಕಾರಿ ನಿಷೇಧಾಜ್ಞೆಯು ಏಪ್ರಿಲ್ 23 ಮತ್ತು 24ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ Tumkur news ತುಮಕೂರು: ಜಿಲ್ಲೆಯ ತುಮಕೂರು ನಗರದಲ್ಲಿ 19, ತಿಪಟೂರು ನಗರದಲ್ಲಿ 4 ಹಾಗೂ ಶಿರಾ ನಗರದಲ್ಲಿ 2 ಪರೀಕ್ಷಾ ಕೇಂದ್ರ ಸೇರಿದಂತೆ 25 ಕೇಂದ್ರಗಳಲ್ಲಿ ಏಪ್ರಿಲ್ 23 ಮತ್ತು 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ […]

Continue Reading

ತುಮಕೂರು: ಬಾಸ್ಕೆಟ್ ಬಾಲ್ ಬೇಸಿಗೆ ಶಿಬಿರಕ್ಕೆ ಚಾಲನೆ

ಬಾಸ್ಕೆಟ್‌ಬಾಲ್ ಬೇಸಿಗೆ ಶಿಬಿರ ಆರಂಭ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ: ಮೊಬೈಲ್ ಬಿಟ್ಟು ಅಂಕಣಕ್ಕಿಳಿದ ಮಕ್ಕಳು ತುಮಕೂರು: ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ ತಿಳಿಸಿದರು. ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದ ಆವರಣದಲ್ಲಿರುವ ಡಾ.ಜಿ.ಪರಮೇಶ್ವರ್ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಶನ್‌ ಆಯೋಜಿಸಿದ್ದ ಬಾಸ್ಕೆಟ್‌ಬಾಲ್ ಬೇಸಿಗೆ ಶಿಬಿರ ಉದ್ಟಾಟಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ಒತ್ತಾಸೆಯ ಫಲವಾಗಿ ಹೆಚ್ಚು […]

Continue Reading

ತುಮಕೂರು: ‘ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ’: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಶುಭ ಕಲ್ಯಾಣ್

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ’: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಶುಭ ಕಲ್ಯಾಣ್ Tumkur news ತುಮಕೂರು: ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 8ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರಿನ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಯನ್ನು […]

Continue Reading

ತುಮಕೂರು: ಏ.8ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಡಿಸಿ ವಿಶ್ವಾಸ

ಏ.8ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಡಿಸಿ ವಿಶ್ವಾಸ Tumkur news ತುಮಕೂರು: ಏ.8ರಂದು ನಡೆಯಲಿರುವ ಜನ ಸ್ಪಂದನ ಸಭೆಯಲ್ಲಿ ಗರಿಷ್ಠ ಮಟ್ಟದ ಪರಿಹಾರಗಳು ಸಿಗಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರ ಕೇಂದ್ರ ಗ್ರಂಥಾಲಯದಲ್ಲಿ ಶುಕ್ರವಾರ ಏಪ್ರಿಲ್ 8 ರಂದು ನಡೆಯಲಿರುವ ಜನ ಸ್ಪಂದನ ಕಾರ್ಯಕ್ರಮಕ್ಕಾಗಿ ಪೂರ್ವ ಸಿದ್ಧತೆ‌ಪರಿಶೀಲನೆ ನಡೆಸಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ […]

Continue Reading

ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಡಿ.ಸಿ. ಕರೆ

ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಡಿ.ಸಿ ಕರೆ Tumkur News ತುಮಕೂರು: ಭಾರತ ಸರ್ಕಾರದ ಜನಗಣತಿ-2026 ಕಾರ್ಯದ ಅಂಗವಾಗಿ ತುಮಕೂರು ಜಿಲ್ಲೆಯಲ್ಲಿ ಏಪ್ರಿಲ್ 15ರವರೆಗೆ ಸ್ವಯಂ ಗಣನೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ಕುಟುಂಬಗಳು ತಮಗೆ ಸಂಬಂಧಿಸಿದ ಜನಗಣತಿ ಮಾಹಿತಿಯನ್ನು ಸ್ವಯಂವಾಗಿ ಆನ್‌ಲೈನ್ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ವಯಂ ಗಣನೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದರಿಂದ ಜನಗಣತಿ ಕಾರ್ಯವು ವೇಗವಾಗಿ, ಸುಲಭವಾಗಿ ಮತ್ತು ಶುದ್ಧತೆಯಿಂದ ಪೂರ್ಣಗೊಳ್ಳಲು ಸಹಕಾರಿ ಆಗುತ್ತದೆ. […]

Continue Reading

ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಉದ್ಘಾಟಿಸಿದ ರಾಷ್ಟ್ರಪತಿ

ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಉದ್ಘಾಟಿಸಿದ ರಾಷ್ಟ್ರಪತಿ ಮಠದ ಶಿಕ್ಷಣ ಕ್ರಾಂತಿಗೆ ರಾಷ್ಟ್ರಪತಿ ಶ್ಲಾಘನೆ; ಕರ್ನಾಟಕ ರಾಷ್ಟ್ರ ನಿರ್ಮಾಣದ ಪ್ರಮುಖ ಕೇಂದ್ರ; ಭಾಷಣದಲ್ಲಿ ಕುವೆಂಪು ನೆನೆದ ರಾಷ್ಟ್ರಪತಿ Tumkur News ತುಮಕೂರು: ಶಿಕ್ಷಣವು ವ್ಯಕ್ತಿತ್ವ ವಿಕಸನ ಮತ್ತು ವ್ಯಕ್ತಿತ್ವ ನಿರ್ಮಾಣದ ಅಡಿಪಾಯವಾಗಿದೆ ಹಾಗೂ ಶಿಕ್ಷಣವು ಸ್ವಾವಲಂಬನೆಗೆ ದಾರಿ ಮಾಡಿಕೊಡಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿಪ್ರಾಯ ವ್ಯಕ್ತಪಡಿಸಿದರು. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಬುಧವಾರ ಆಯೋಜಿಸಿದ್ದ ಲಿಂಗೈಕ್ಯ ಡಾ: ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮ […]

Continue Reading

ಡಾ.ಶಿವಕುಮಾರ ಸ್ವಾಮಿಗಳ ಜಯಂತಿ ಕಾರ್ಯಕ್ರಮದಲ್ಲಿ ಸಿದ್ಧಲಿಂಗ ಶ್ರೀಗಳ ಕಡೆಗಣನೆ!; ಭಕ್ತರ ಆಕ್ರೋಶ

ಡಾ.ಶಿವಕುಮಾರ ಸ್ವಾಮಿಗಳ ಜಯಂತಿ ಕಾರ್ಯಕ್ರಮದಲ್ಲಿ ಸಿದ್ಧಲಿಂಗ ಶ್ರೀಗಳ ಕಡೆಗಣನೆ!; ಭಕ್ತರ ಆಕ್ರೋಶ ಗುರುವಂದನೆ ಕಾರ್ಯಕ್ರಮದಲ್ಲಿ ಮಠಾಧ್ಯಕ್ಷರನ್ನೇ ಕಡೆಗಣಿಸಲಾಗಿದೆ ಎಂದು ಭಕ್ತರ ಅಸಮಾಧಾನ Tumkur News ತುಮಕೂರು: ಶ್ರೀ ಸಿದ್ದಗಂಗಾ ಮಠದಲ್ಲಿ ಬುಧವಾರ ನಡೆದ ಲಿಂ.ಡಾ. ಶ್ರೀ ಶಿವಕುಮಾರ ಸ್ವಾಮಿಗಳ 119ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವದಲ್ಲಿ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯನ್ನು ಶಿಷ್ಟಾಚಾರದ ಹೆಸರಿನಲ್ಲಿ ಕಡೆಗಣಿಸಲಾಗಿದೆ ಎಂದು ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುರುವಂದನಾ ಮಹೋತ್ಸವ ಕಾರ್ಯಕ್ರಮದಲ್ಲಿ, ಪೀಠಾಧ್ಯಕ್ಷರಿಗೆ ವೇದಿಕೆಯ ತುದಿಯಲ್ಲಿ ಆಸನದ ವ್ಯವಸ್ಥೆಯನ್ನು ಕಲ್ಪಿಸಿರುವುದು ಇದೀಗ ಭಕ್ತರ […]

Continue Reading