ತುಮಕೂರು: ‘ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ’: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಶುಭ ಕಲ್ಯಾಣ್

ಜಿಲ್ಲಾ ಸುದ್ದಿ ತುಮಕೂರು ನಗರ ಪ್ರಮುಖ ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ’:
ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಶುಭ ಕಲ್ಯಾಣ್

Tumkur news
ತುಮಕೂರು: ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 8ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರಿನ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಏಪ್ರಿಲ್ 8ರಂದು ಬೆಳಿಗ್ಗೆ 11 ಗಂಟೆಗೆ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಜಾಗದಲ್ಲಿ 10 ವಿವಿಧ ಪ್ರಮುಖ ಇಲಾಖೆಗಳ ಮಳಿಗೆಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಅಲ್ಲದೆ, ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರು ಸ್ಥಳದಲ್ಲಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕಾರ್ಯಕ್ರಮ ಇದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾರ್ಯಕ್ರಮ ಸ್ಥಳದಲ್ಲಿ ನಿರ್ಮಿಸಲಾಗುವ ತಾತ್ಕಾಲಿಕ ಮಳಿಗೆಗಳಲ್ಲಿ ಐಪಿಜಿಆರ್‌ಎಸ್ ತಂತ್ರಾಂಶ ಒಳಗೊಂಡ ಡಾಟಾ ಎಂಟ್ರಿ, ಕಂಪ್ಯೂಟರ್ ವ್ಯವಸ್ಥೆ, ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಾರ್ಯಕ್ರಮ ರೂಪಿಸುವ ಸಂಬಂಧ ಆದೇಶವನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ತುಮಕೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಗಳನ್ನು ನೀಡಲಾಗಿದೆ. ಅಲ್ಲದೆ, ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಟಿಲ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರವನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲಾದ್ಯಂತ ಆಗಮಿಸುವ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಸೌಲಭ್ಯಗಳನ್ನು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಒದಗಿಸಲು ಕ್ರಮವಹಿಸಲಾಗಿದೆ. ಸಾರ್ವಜನಿಕರಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅವರು ಮನವಿ ಮಾಡಿದ್ದಾರೆ.
ಜನಸ್ಪಂದನದಲ್ಲಿ ಅಹವಾಲುಗಳಿಗೆ ತಾರ್ಕಿಕ ಅಂತ್ಯ; ಅಧಿಕಾರಿಗಳಿಗೆ ಡಿ.ಸಿ. ಸೂಚನೆ: ಕಾರ್ಯಕ್ರಮದ ದಿನದಂದು ಮೊದಲು ಎಲ್ಲಾ ಇಲಾಖೆಗಳ ಮುಖ್ಯಸ್ಥರು ಹಾಜರಿದ್ದು, ಎಲ್ಲಾ ಇಲಾಖೆಗಳ ಮುಖ್ಯಸ್ಥರು ಪರಸ್ಪರ ಸಹಕಾರದೊಂದಿಗೆ ಸಾರ್ವಜನಿಕರಿಂದ ಬಂದಂತಹ ಅಹವಾಲುಗಳಿಗೆ ತಾರ್ಕಿಕ ಅಂತ್ಯ ಸಿಗುವಂತೆ ಕೆಲಸ ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಎಲ್ಲಾ ತಾಲ್ಲೂಕುಗಳಿಂದ ಸುಮಾರು 2500 ಅರ್ಜಿಗಳು ಬಂದಿದ್ದು, ತಮ್ಮ ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಪರಿಶೀಲಿಸಿ, ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಲೋಪವಿಲ್ಲದೆ ನಿರ್ವಹಿಸಬೇಕೆಂದು ಅವರು ಸೂಚಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *