ಕುಣಿಗಲ್ : ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು
ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಸಮೀಪ ಜಿಗಣಿ ಪಾಳ್ಯದ ಬಳಿ ಅಪಘಾತ
Tumkur news
ತುಮಕೂರು: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ ಶನಿವಾರ ನಡೆದಿದೆ.
ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಸಮೀಪ ಜಿಗಣಿ ಪಾಳ್ಯದ ಬಳಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮಂಡ್ಯ ಜಿಲ್ಲೆ ಸುವರ್ಣಸಂದ್ರ ಮೂಲದ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಗಾಯತ್ರಿ(68), ನರಸಿಂಹ (65), ಗಾಯತ್ರಿ(68), ಕುಮಾರ್ ನರಸಿಂಹ ಸ್ವಾಮಿ(65) ಎಂದು ಗುರುತಿಸಲಾಗಿದೆ.
ಘಟನೆ ವಿವರ: ಮೃತರು ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಮಂಡ್ಯ ಕಡೆಗೆ ಆಲ್ಟೋ(KA 11 N 1211 )ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಲಾರಿ(KA 03-D-5599) ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮೃತರು ತುಮಕೂರಿನ ದೇವರಾಯನದುರ್ಗ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದ ವೇಳೆ ಅಪಘಾತದಲ್ಲಿ ಅಸುನೀಗಿದ್ದಾರೆ.
ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹಗಳನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.


