cool hit counter

EV BUS | ಕರ್ನಾಟಕಕ್ಕೆ 1,243 ಇವಿ ಚಾರ್ಜಿಂಗ್ ಕೇಂದ್ರ ಮಂಜೂರು

ಪಿಎಂ ಇ-ಡ್ರೈವ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಅನುಮೋದನೆ

Tumkur News
Ashok R.P. is a passionate journalist and media professional known for his dedication to truthful, people-centric reporting. With a keen interest in regional news, public issues,...
1 Min Read

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪಿಎಂ ಇ-ಡ್ರೈವ್ ಯೋಜನೆಯಡಿ ಕರ್ನಾಟಕಕ್ಕೆ 1,243 ಇವಿ ಚಾರ್ಜಿಂಗ್ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಇವಿ ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಸಾವಿರಾರು ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಭಾರಿ ಅನುದಾನ ನೀಡಿದ್ದು, ಕರ್ನಾಟಕಕ್ಕೂ ಮಹತ್ವದ ಹಂಚಿಕೆ ದೊರೆತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು ₹123 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಈ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ನಗರ ಹಾಗೂ ಹೆದ್ದಾರಿ ಭಾಗಗಳಲ್ಲಿ ಹಂತ ಹಂತವಾಗಿ ಅವು ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಇದರಿಂದ ಸಾರ್ವಜನಿಕ ಇವಿ ಬಳಕೆ ಹೆಚ್ಚಲು ಹಾಗೂ ಚಾರ್ಜಿಂಗ್ ಸೌಲಭ್ಯ ಸುಲಭವಾಗಲು ನೆರವಾಗಲಿದೆ.

ದೇಶದಲ್ಲಿ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಬ್ಯಾಟರಿ ಉತ್ಪಾದನೆ ಮತ್ತು ಇವಿ ಮೂಲಸೌಕರ್ಯ ವಿಸ್ತರಣೆಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಕುಮಾರಸ್ವಾಮಿ ತಿಳಿ toಸಿದ್ದಾರೆ.

Share This Article
Follow:
Ashok R.P. is a passionate journalist and media professional known for his dedication to truthful, people-centric reporting. With a keen interest in regional news, public issues, politics, social developments, and ground-level reporting, he has built a reputation for delivering accurate and impactful stories that connect with the common people. He actively covers current affairs, civic issues, crime reports, political events, cultural programs, and human-interest stories with a commitment to ethical journalism. His reporting style focuses on clarity, credibility, and public awareness, making his work relatable and informative to readers across Karnataka. Ashok R.P. believes journalism is a powerful medium to raise public voice and strengthen democracy through responsible reporting and factual storytelling. Special Interests: * Regional & Political News * Public Interest Stories * Social Awareness Reporting * Ground Reality Journalism * Digital Media & News Publishing
Leave a Comment