ಬೆಂಗಳೂರು: ಕನ್ನಡ ಕಿರುತೆರೆ ಹಾಗೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನ ಸುದ್ದಿ ಚಿತ್ರರಂಗದಲ್ಲಿ ಶೋಕದ ವಾತಾವರಣ ಮೂಡಿಸಿದೆ.
ಮನೆಯಲ್ಲಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡ ದಿಲೀಪ್ ರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ದಿಲೀಪ್ ರಾಜ್ ಹಲವು ಕನ್ನಡ ಸಿನಿಮಾಗಳು ಹಾಗೂ ಧಾರಾವಾಹಿಗಳ ಮೂಲಕ ಜನಪ್ರಿಯತೆ ಗಳಿಸಿದ್ದರು. ಗಂಭೀರ ಹಾಗೂ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ಅವರು, ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು.
ಅವರ ನಿಧನಕ್ಕೆ ಚಿತ್ರರಂಗದ ಕಲಾವಿದರು, ಅಭಿಮಾನಿಗಳು ಹಾಗೂ ಆಪ್ತರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.
