cool hit counter

Breaking | ದರ್ಶನ್‌ಗೆ ಜಾಮೀನು ನಿರಾಕರಣೆ: ಒಂದು ವರ್ಷದೊಳಗೆ ಸಾಕ್ಷಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಸೂಚನೆ

Webgauge India
1 Min Read

ನವದೆಹಲಿ/ಬೆಂಗಳೂರು: ಬಹುಚರ್ಚಿತ ಪ್ರಕರಣದಲ್ಲಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ಆದರೆ ಪ್ರಕರಣದ ವಿಚಾರಣೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮಹತ್ವದ ನಿರ್ದೇಶನಗಳನ್ನು ನೀಡಿದೆ.

ಪ್ರಕರಣದಲ್ಲಿ ಸುಮಾರು 250ಕ್ಕೂ ಹೆಚ್ಚು ಸಾಕ್ಷಿದಾರರು ಇರುವ ಹಿನ್ನೆಲೆ, ವಿಚಾರಣೆಯನ್ನು ವಿಳಂಬ ಮಾಡದೆ ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ನ್ಯಾಯಾಲಯ ಸೂಚಿಸಿದೆ ಎಂದು ತಿಳಿದುಬಂದಿದೆ. ವಿಚಾರಣೆ ಸುಗಮವಾಗಿ ನಡೆಯಲು ಅಗತ್ಯವಿದ್ದರೆ ಶಾಶ್ವತ ನ್ಯಾಯಾಧೀಶರ ನೇಮಕಾತಿ ಕುರಿತಂತೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್‌ಗೆ ಸಹ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ದರ್ಶನ್ ಪರ ವಕೀಲರು ದೀರ್ಘಕಾಲದ ಬಂಧನ, ತನಿಖೆ ಪೂರ್ಣಗೊಂಡಿರುವುದು ಹಾಗೂ ವಿಚಾರಣೆಯಲ್ಲಿ ವಿಳಂಬವಾಗುತ್ತಿರುವುದನ್ನು ಉಲ್ಲೇಖಿಸಿ ಜಾಮೀನು ಕೋರಿ ಮನವಿ ಸಲ್ಲಿಸಿದ್ದರು. ಆದರೆ ಪ್ರಕರಣದ ಗಂಭೀರತೆ   ಸಾಧ್ಯತೆಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.

ಇದರ ಜೊತೆಗೆ, ಜೈಲಿನಲ್ಲಿ ದರ್ಶನ್‌ಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ. ಆರೋಗ್ಯ ಹಾಗೂ ಕಾನೂನುಬದ್ಧ ಹಕ್ಕುಗಳಿಗೆ ಸಂಬಂಧಿಸಿದ ಸೌಲಭ್ಯಗಳಲ್ಲಿ ಯಾವುದೇ ವ್ಯತ್ಯಯವಾಗಬಾರದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಪ್ರಕರಣದ ವೇಗವಾದ ವಿಚಾರಣೆ ಮತ್ತು ನಿಗದಿತ ಅವಧಿಯೊಳಗೆ ತೀರ್ಮಾನಕ್ಕೆ ತಲುಪಿಸುವ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳು ಇದೀಗ ರಾಜ್ಯ ರಾಜಕೀಯ ಹಾಗೂ ಸಿನಿ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ.

 

Share This Article
Leave a Comment