cool hit counter

ಚಿತ್ರದುರ್ಗ| RSI ಪ್ರೇಮದ ಬಲೆ: ಮದುವೆ ನಂಬಿಸಿ ಯುವತಿಗೆ ಮೋಸ ಆರೋಪ

Webgauge India
1 Min Read
Spread the love

ಚಿತ್ರದುರ್ಗ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಕೈಕೊಟ್ಟ ಆರೋಪದಡಿ DAR ವಿಭಾಗದ RSI ವರುಣ್ ಕುಮಾರ್ ವಿರುದ್ಧ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದಾವಣಗೆರೆ ಮೂಲದ ಪೂರ್ಣಿಮಾ ಎಂಬ ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ನ್ಯಾಯಕ್ಕಾಗಿ ಚಿತ್ರದುರ್ಗ ಎಸ್‌ಪಿ Ranjit Kumar ಅವರಿಗೆ ಮನವಿ ಸಲ್ಲಿಸಿದ್ದಾಳೆ.

ದೂರುದಾರೆಯ ಪ್ರಕಾರ, ಸುಮಾರು ಒಂದು ವರ್ಷದ ಹಿಂದೆ ಇನ್‌ಸ್ಟಾಗ್ರಾಂ ಮೂಲಕ ಇಬ್ಬರಿಗೂ ಪರಿಚಯವಾಗಿತ್ತು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪೂರ್ಣಿಮಾ ಹಾಗೂ ಪೊಲೀಸ್ ತರಬೇತಿಗಾಗಿ ಬೆಂಗಳೂರಿಗೆ ತೆರಳಿದ್ದ RSI ವರುಣ್ ಕುಮಾರ್ ನಡುವೆ ಸ್ನೇಹ ಬೆಳೆದು ಬಳಿಕ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ.

- Advertisement -

ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಲೈಂಗಿಕ ಸಂಬಂಧ ಬೆಳೆಸಿದ ವರುಣ್ ಕುಮಾರ್, ನಂತರ ಯುವತಿ ಗರ್ಭಿಣಿಯಾಗುತ್ತಿದ್ದಂತೆ ಗರ್ಭಪಾತ ಮಾತ್ರೆ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಳಿಕ ಮದುವೆಗೆ ಒತ್ತಾಯಿಸಿದಾಗ ಆರೋಪಿ ದೂರವಾಗಿದ್ದು, ಇದೀಗ ನಾಪತ್ತೆಯಾಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಪೊಲೀಸ್ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದು, ಆರೋಪಿ RSI ವರುಣ್ ಕುಮಾರ್ ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ಸಂತ್ರಸ್ತ ಯುವತಿ ಆಗ್ರಹಿಸಿದ್ದಾಳೆ.

Share This Article
Leave a Comment