ಪಾವಗಡ; ಮಾಜಿ ಸಚಿವ ವೆಂಕಟರಮಣಪ್ಪ ನಿಧನ
Tumkur news
ಪಾವಗಡ: ತುಮಕೂರು ಜಿಲ್ಲೆಯ ಹಿರಿಯ ರಾಜಕೀಯ ನಾಯಕ ಹಾಗೂ ಮಾಜಿ ಸಚಿವ ಪಾವಗಡದ ವೆಂಕಟರಮಣಪ್ಪ (80) ಹೃದಯಾಘಾತದಿಂದ ನಿಧನರಾಗಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಹಲವು ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಅವರು, ಸರಳತೆ ಮತ್ತು ಜನಸೇವೆಯ ಮೂಲಕ ವಿಶೇಷವಾಗಿ ಗುರುತಿಸಿಕೊಂಡಿದ್ದರು.
ವೆಂಕಟರಮಣಪ್ಪ ಅವರು ಪತ್ನಿ ಶಾರದಮ್ಮರನ್ನು ಆರು ವರ್ಷಗಳ ಹಿಂದೆ ಅನಾರೋಗ್ಯದಿಂದ ಕಳೆದುಕೊಂಡಿದ್ದರು. ಅವರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬ ಪುತ್ರಿ ಇದ್ದಾರೆ. ಹಿರಿಯ ಪುತ್ರ ಕುಮಾರಸ್ವಾಮಿ ಕುಟುಂಬದ ವಿದ್ಯಾಸಂಸ್ಥೆಗಳ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದು, ಕಿರಿಯ ಪುತ್ರ ಹೆಚ್.ವಿ. ವೆಂಕಟೇಶ್ ಪ್ರಸ್ತುತ ಪಾವಗಡ ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
What do you feel about this post?
0%
Like
0%
Love
0%
Happy
0%
Haha
0%
Sad
0%
