ತುಮಕೂರು: ಆಗಸ್ಟ್’ನಲ್ಲಿ ತಿಪಟೂರುಗೆ ಮುಖ್ಯಮಂತ್ರಿ ಭೇಟಿ: ಜಿಪಂ ಸಿಇಒ ಅಶ್ವಿಜ

ಆಗಸ್ಟ್’ನಲ್ಲಿ ತಿಪಟೂರುಗೆ ಮುಖ್ಯಮಂತ್ರಿ ಭೇಟಿ: ಜಿಪಂ ಸಿಇಒ ಅಶ್ವಿಜ Tumkur news ತುಮಕೂರು: ಅಧಿಕಾರಿಗಳು ಕಡ್ಡಾಯವಾಗಿ ಕರ್ತವ್ಯ ಆಪ್ ಬಳಸಿ ನಿಗಧಿತ ಸಮಯಕ್ಕೆ ಸರಿಯಾಗಿ ಕಚೇರಿಗೆ ಆಗಮಿಸಿ ಹಾಜರಾತಿಯನ್ನು ಹಾಕಬೇಕು. ತಮ್ಮ ಕಚೇರಿಯಲ್ಲಿ ಭ್ರಷ್ಟಾಚಾರ ತಡೆಯುವ ಸಲುವಾಗಿ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ನೋಟೀಸ್ ಬೋರ್ಡ್ನಲ್ಲಿ ಹಾಕಬೇಕು. ಇಲಾಖೆ ವ್ಯಾಪ್ತಿಯಲ್ಲಿ ಚಾಲನೆಯಲ್ಲಿರುವ ಕಟ್ಟಡ ಕಾಮಗಾರಿಗಳನ್ನು ಆಗಸ್ಟ್ ವೇಳೆಗೆ ಪೂರ್ಣಗಳಿಸಿ ಇಚ್ಚಾಶಕ್ತಿಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಪಂ ಸಿಇಒ ಅಶ್ವಿಜ ಬಿ.ವಿ ತಿಳಿಸಿದರು. ತಿಪಟೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ […]

Continue Reading

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ರದ್ದುಗೊಳಿಸಲು ತೀವ್ರ ಒತ್ತಾಯ

ಎಕ್ಸ್ ಪ್ರೆಸ್ ಕೆನಾಲ್ ಜಿಲ್ಲೆಯ ಜನರ ಪಾಲಿಗೆ ಮರಣ ಶಾಸನ ರದ್ದುಗೊಳಿಸದಿದ್ದರೆ ಉಗ್ರ ಹೋರಾಟ: ಸೊಗಡು ಶಿವಣ್ಣ ಎಚ್ಚರಿಕೆ Tumkur news ತುಮಕೂರು: ಜಿಲ್ಲೆಯ ಜನರ ಪಾಲಿಗೆ ಮರಣ ಶಾಸನವಾಗಿರುವ ಅವೈಜ್ಞಾನಿಕ, ವಿವಾದಿತ ಹೇಮಾವತಿ ಎಕ್ಸ್ ಪ್ರೆಸ್ ಪೈಪ್‌ಲೈನ್ ಲಿಂಕ್ ಕೆನಾಲ್ ಯೋಜನೆಯನ್ನು ರದ್ದುಗೊಳಿಸಬೇಕು, ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಸ್ಥಗಿತಗೊಳಿಸಬೇಕು ಎಂದು […]

Continue Reading

ತುಮಕೂರು: ಶಾಸಕ ಷಡಕ್ಷರಿ ಚೇತರಿಕೆ, ಇಂದು ತಿಪಟೂರಿಗೆ

ಶಾಸಕ ಷಡಕ್ಷರಿ ಚೇತರಿಕೆ, ಶನಿವಾರ ತಿಪಟೂರಿಗೆ Tumkur news ತುಮಕೂರು: ಗುರುವಾರ ಬೆಳಗ್ಗೆ ತೀರಾ ಅಸ್ವಸ್ಥರಾಗಿದ್ದ ಕೆ. ಷಡಕ್ಷರಿಯವರು ಪರಿಣಾಮಕಾರಿ ಚಿಕಿತ್ಸೆ ನಂತರ ಗುಣಮುಖರಾಗಿದ್ದು, ಆರೋಗ್ಯದಲ್ಲಿ ಚೇತರಿಕೆಯಾಗಿದೆ ಎಂದು ನ್ಯಾಕೇನಹಳ್ಳಿ ಸುರೇಶ್ ತಿಳಿಸಿದ್ದಾರೆ. ಇಂದು ಬೆಳಗ್ಗೆ ನವದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಶಾಸಕರನ್ನು ಭೇಟಿ ಮಾಡಿದ ಸುರೇಶ್ ನೇತೃತ್ವದ ಷಡಕ್ಷರಿ ಅವರ ಅಭಿಮಾನಿಗಳ ತಂಡ ಆರೋಗ್ಯ ವಿಚಾರಿಸಿದೆ. ಸಂಜೆಯವರೆಗೂ ಅಲ್ಲಿಯೇ ಇದ್ದು, ಅವರ ಯೋಗಕ್ಷೇಮ ಗಮನಿಸಿದ ನಂತರ ಗುಣಮುಖರಾದ ಕಾರಣ ಶುಕ್ರವಾರ ಸಂಜೆಯ ಮೇಲೆ ಕರ್ನಾಟಕ ಭವನಕ್ಕೆ ಅವರನ್ನು […]

Continue Reading

ತುಮಕೂರು: ಗೋಲಿಬಾರ್ ಆದರೂ ಹೆದರಲ್ಲ: ಎಕ್ಸ್‌ಪ್ರೆಸ್‌ ಕೆನಾಲ್ ಮಾಡಲು ಬಿಡಲ್ಲ

ಗೋಲಿಬಾರ್ ಆದರೂ ಹೆದರಲ್ಲ: ಎಕ್ಸ್‌ಪ್ರೆಸ್‌ ಕೆನಾಲ್ ಮಾಡಲು ಬಿಡಲ್ಲ Tumkur news ತುಮಕೂರು: ಕುಣಿಗಲ್ ಮೂಲಕ ಮಾಗಡಿ ಮತ್ತು ರಾಮನಗರಕ್ಕೆ ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಮೂಲಕ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಕಾಮಗಾರಿಗೆ ನಮ್ಮ ವಿರೋಧವಿದ್ದು, ಇರುವ ನಾಲೆಯಲ್ಲಿ ನೀರು ತೆಗೆದುಕೊಂಡು ಹೋಗಲು ನಮ್ಮ ಅಭ್ಯಂತರವಿಲ್ಲ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಡಿ.ಸಿ.ಎಂ. ಹಾಗೂ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ತರಾತುರಿಯಲ್ಲಿ ಕಾಮಗಾರಿ ನಡೆಸಲು […]

Continue Reading

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್’ಗೆ ಡಿಕೆಶಿ ಪವರ್

ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್’ಗೆ ಡಿಕೆಶಿ ಪವರ್ ರಾಮನಗರ, ಮಾಗಡಿಗೆ ನೀರು ಕೊಂಡೊಯ್ಯಲು ಮರು ಚಾಲನೆ: ಡಿಕೆಶಿ, ಪರಂ ವಿರುದ್ದ ರೈತರು ಗರಂ; ಹೋರಾಟದ ಎಚ್ಚರಿಕೆ – ಅಶೋಕ್ ಆರ್.ಪಿ ತುಮಕೂರು: ಜಿಲ್ಲೆಯ ಜನತೆಯ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಹೇಮಾವತಿ ಲಿಂಕ್ ಕೆನಾಲ್ ಯೋಜನೆಗೆ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಿದ್ದಂತೆ ಪುನಃ ಚಾಲನೆ ನೀಡಲಾಗುತ್ತಿದೆ. ಇದು ಜಿಲ್ಲೆಯ ರೈತರು ಮತ್ತು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದ್ದು, ರಾಜ್ಯದಲ್ಲಿ ಮತ್ತೊಂದು ನೀರಿನ ಹೋರಾಟಕ್ಕೆ ತುಮಕೂರು ಸಾಕ್ಷಿಯಾಗುವ ಮುನ್ಸೂಚನೆ ನೀಡಿದೆ. ಸಿದ್ದರಾಮಯ್ಯ […]

Continue Reading

ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ Tumkur news ತುಮಕೂರು: ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರ(ಪಿ.ಯು.ಸಿ., ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರವರ್ಗ-1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2.50ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ವಿದ್ಯಾರ್ಥಿಯ ಕುಟುಂಬದ […]

Continue Reading

ತುಮಕೂರು: ಆಕ್ಷೇಪಣೆ ಸಲ್ಲಿಸಲು 15 ದಿನಗಳ ಗಡುವು: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಆಕ್ಷೇಪಣೆ ಸಲ್ಲಿಸಲು 15 ದಿನಗಳ ಗಡುವು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ Tumkur news ತುಮಕೂರು: ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳು, ದ್ವಿತೀಯ ದರ್ಜೆ ಸಹಾಯಕರ ವೃಂದದ ನೌಕರರಿಗೆ ಪ್ರಥಮ ದರ್ಜೆ ಸಹಾಯಕರು, ಪ್ರಥಮ ದರ್ಜೆ ರಾಜಸ್ವ ನಿರೀಕ್ಷಕರ ವೃಂದದ ಹುದ್ದೆಗೆ ಮುಂಬಡ್ತಿ, ಪದೋನ್ನತಿ ನೀಡಲು ದಿನಾಂಕ:೦೧/೦೧/೨೦೨೬ ರಲ್ಲಿದಂತೆ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ದ್ವಿತಿಯ ದರ್ಜೆ ಸಹಾಯಕರ ವೃಂದದ ನೌಕರರ ಕರಡು ಸಂಯುಕ್ತ ಜೇಷ್ಠತಾ ಪಟ್ಟಿಯನ್ನು ಮೇ 9 ರಂದು ಹೊರಡಿಸಲಾಗಿದ್ದು, […]

Continue Reading

ತುಮಕೂರು: ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಅಡ್ಡಿ : ಪೊಲೀಸ್ ರಕ್ಷಣೆ ನೀಡಲು ಡಿ.ಸಿ ಸೂಚನೆ

ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಅಡ್ಡಿ : ಪೊಲೀಸ್ ರಕ್ಷಣೆ ನೀಡಲು ಡಿ.ಸಿ ಸೂಚನೆ Tumkur news ತುಮಕೂರು: ತಾಲ್ಲೂಕಿನ ಕೋರ ಹೋಬಳಿ ಚಿಕ್ಕೋನಹಳ್ಳಿ ಗ್ರಾಮದಲ್ಲಿ ಭೂಸ್ವಾಧೀನಪಡಿಸಿ ಪರಿಹಾರ ಪಾವತಿಸಲಾಗಿದ್ದರೂ ಸಹ ಹಲವು ಭೂಮಾಲೀಕರು, ಕಾಮಗಾರಿಗೆ ಅಡ್ಡಿಪಡಿಸುತ್ತಿರುವುದರಿಂದ ಪೊಲೀಸ್ ರಕ್ಷಣೆ ಕೊಡಿಸುವಂತೆ ತುಮಕೂರು ಎತ್ತಿನಹೊಳೆ ಯೋಜನೆ ಕಾರ್ಯಪಾಲಕ ಅಭಿಯಂತರರು ಕೋರಿದ್ದು, ಇವರ ಕೋರಿಕೆಯಂತೆ ಅಗತ್ಯ ರಕ್ಷಣೆ ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ವಿವಿಧ ಯೋಜನೆಗಳ […]

Continue Reading

ತುಮಕೂರು: ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ: ಯಶಸ್ವಿಯಾಗಿ ನಡೆಸುವಂತೆ ಡಿ.ಸಿ. ಸೂಚನೆ

ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ: ಯಶಸ್ವಿಯಾಗಿ ನಡೆಸುವಂತೆ ಡಿ.ಸಿ. ಸೂಚನೆ Tumkur news ತುಮಕೂರು: ಜಿಲ್ಲಾಡಳಿತ, ಆಯುಷ್ ಇಲಾಖೆ, ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆ, ಪತಂಜಲಿ ಯೋಗ ಶಿಕ್ಷಣ ಸಮಿತಿ ಹಾಗೂ ಇತರೆ ಸಂಸ್ಥೆಯ ಸಹಯೋಗದಲ್ಲಿ ಜೂನ್ 21ರಂದು ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಿಷ್ಟಾಚಾರವನ್ನು ಪಾಲಿಸಿ ಯಶಸ್ವಿಯಾಗಿ ನಡೆಸುವಂತೆ ಜಿಲ್ಲಾ ಆಯುಷ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣ ಇತ್ತೀಚೆಗೆ ನಡೆದ 12ನೇ […]

Continue Reading

ತುಮಕೂರು: ಮೂರು ಬಾರಿ ಕೈ ತಪ್ಪಿದ ಮುಖ್ಯಮಂತ್ರಿ ಖುರ್ಚಿ; ಪರಮೇಶ್ವರ್ ಕಣ್ಣೀರು

ಮೂರು ಬಾರಿ ಕೈ ತಪ್ಪಿದ ಮುಖ್ಯಮಂತ್ರಿ ಖುರ್ಚಿ; ಪರಮೇಶ್ವರ್ ಕಣ್ಣೀರು ತಮ್ಮ 40 ವರ್ಷಗಳ ರಾಜಕೀಯ ಜೀವನದ ಏಳುಬೀಳನ್ನು ನೆನೆದು ಬಾವುಕರಾದ ಡಾ.ಜಿ ಪರಮೇಶ್ವರ್ Tumkur news ತುಮಕೂರು: ತಮ್ಮ ರಾಜಕೀಯ ಜೀವನ ನಡೆದು ಬಂದ ಹಾದಿ ಹಾಗೂ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿದ್ದನ್ನು ನೆನೆದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಕಣ್ಣೀರು ಹಾಕಿದ್ದಾರೆ. ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಅವರು ನಾನು ರಾಜಕೀಯಕ್ಕೆ ಬರುವ ಕಲ್ಪನೆ ಕೂಡ ಇರಲಿಲ್ಲ. ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ನಮ್ಮ […]

Continue Reading