ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ
Tumkur news
ತುಮಕೂರು: ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರ(ಪಿ.ಯು.ಸಿ., ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರವರ್ಗ-1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2.50ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 1 ಲಕ್ಷ ರೂ. ಮಿತಿಯೊಳಗಿರಬೇಕು. ಅರ್ಹ ವಿದ್ಯಾರ್ಥಿಗಳು ಜೂನ್ 15ರೊಳಗಾಗಿ ತಮ್ಮ ಅರ್ಜಿಯ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು “ಗಣೇಶ್ ಸ್ಟೋರ್”, ಶಾಪ್ ನಂಬರ್ 7, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ತುಮಕೂರು. ಇಲ್ಲಿಗೆ ಭೇಟಿ ನೀಡಬಹುದು.
