ತುಮಕೂರು: ಟಿ.ಬಿ. ಜಯಚಂದ್ರಗೆ ಸಚಿವ ಸ್ಥಾನ ನೀಡುವಂತೆ ಕುಂಚಿಟಿಗ ಮುಖಂಡರ ಆಗ್ರಹ

ಟಿ.ಬಿ. ಜಯಚಂದ್ರಗೆ ಸಚಿವ ಸ್ಥಾನ ನೀಡುವಂತೆ ಕುಂಚಿಟಿಗ ಮುಖಂಡರ ಆಗ್ರಹ “ಈಗ ಹಿರಿಯೂರು ಕ್ಷೇತ್ರದ ಉಪ ಚುನಾವಣೆ ಬರುತ್ತಿದೆ. ಹಿರಿಯೂರಿನಲ್ಲಿ ಕುಂಚಿಟಿಗ ಸಮಾಜದ ಮತದಾರರ ಸಂಖ್ಯೆ ಹೆಚ್ಚಾಗಿದೆ. ಆ ಕ್ಷೇತ್ರದಲ್ಲಿ ಟಿ.ಬಿ ಜಯಚಂದ್ರ ಅವರ ಪ್ರಭಾವವೂ ಇದೆ. ಸರ್ಕಾರ ಇವರಿಗೆ ಸಚಿವ ಸ್ಥಾನ ನೀಡದಿದ್ದರೆ ಹಿರಿಯೂರು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಿರ್ಣಾಯಕ ಮತದಾರರಾಗಿರುವ ಕುಂಚಿಟಿಗರು ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ವಿರುದ್ಧ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ”.- ಆರ್.ಕಾಮರಾಜ್, […]

Continue Reading

131 ಕೋಟಿ ರೂ. ವೆಚ್ಚದಲ್ಲಿ ತುಮಕೂರಿಗೆ ಹೊಸ ಜಿಲ್ಲಾಸ್ಪತ್ರೆ: ಪರಮೇಶ್ವರ್

131 ಕೋಟಿ ರೂ. ವೆಚ್ಚದಲ್ಲಿ ತುಮಕೂರಿಗೆ ಹೊಸ ಜಿಲ್ಲಾಸ್ಪತ್ರೆ: ಪರಮೇಶ್ವರ್ ತುಮಕೂರು ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ತೆರವುಗೊಳಿಸುವ ಕಾಮಗಾರಿಗೆ ಡಾ.ಜಿ ಪರಮೇಶ್ವರ್ ಸೋಮವಾರ ಚಾಲನೆ ನೀಡಿದರು. Tumkur news ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ತುಮಕೂರು ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ತೆರವುಗೊಳಿಸುವ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಸ್ತುತ ಸಾರ್ವಜನಿಕ ಆಸ್ಪತ್ರೆ ಸ್ವಾತಂತ್ರ‍್ಯ ಪೂರ್ವದಲ್ಲಿ ನಿರ್ಮಾಣವಾದ ಆಸ್ಪತ್ರೆಯಾಗಿದ್ದು, ಅತ್ಯಾಧುನಿಕ […]

Continue Reading

ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಪೂರ್ಣಗೊಳಿಸಲು 2027ರವರೆಗೆ ಗಡುವು: ಪರಮೇಶ್ವರ್

ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಪೂರ್ಣಗೊಳಿಸಲು 2027ರವರೆಗೆ ಗಡುವು: ಪರಮೇಶ್ವರ್ ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಬಳ್ಳಾರಿಯಿಂದ ಪಾವಗಡದವರೆಗೆ ಪ್ರಾಯೋಗಿಕವಾಗಿ ರೈಲನ್ನು ಓಡಿಸಲಾಗಿದೆ. ಪಾವಗಡದಿಂದ ತುಮಕೂರಿನವರೆಗಿನ ಕಾಮಗಾರಿ ಬೇರೆ ಬೇರೆ ಕಾರಣಗಳಿಂದ ವಿಳಂಬವಾಗಿತ್ತು. ಇದೀಗ ಅದನ್ನೂ ಬಗೆಹರಿಸಲಾಗಿದ್ದು, ಕಾಮಗಾರಿಯನ್ನು ತ್ವರಿತವಾಗಿ ವರ್ಷದೊಳಗಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿರುವುದಾಗಿ ಪರಮೇಶ್ವರ್ ಹೇಳಿದರು. Tumkur news ತುಮಕೂರು: ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯ ಸಂಬಂಧಿಸಿದಂತೆ ಪಾವಗಡದಿಂದ ತುಮಕೂರುವರೆಗಿನ ಕಾಮಗಾರಿಯನ್ನು ವರ್ಷದೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಿರುವುದಾಗಿ ಉಪ ಮುಖ್ಯಮಂತ್ರಿ ಡಾ: ಜಿ. […]

Continue Reading

ತುಮಕೂರು: ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ; ಅಧಿಕಾರಿಗಳಿಗೆ ತರಬೇತಿ

ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ; ತರಬೇತಿ ಕಾರ್ಯಾಗಾರ Tumkur news ತುಮಕೂರು: ಜಿಲ್ಲೆಯಲ್ಲಿ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸೋಮವಾರ ನಗರದ ಎಂಪ್ರೆಸ್ ಕಾಲೇಜು ಆವರಣದಲ್ಲಿರುವ ಸಭಾಭವನದಲ್ಲಿ ತರಬೇತಿ ಆಯೋಜಿಸಲಾಗಿತ್ತು. ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ವಿಶೇಷ ಸಮಗ್ರ ಪರಿಷ್ಕರಣೆಯ ಮೂಲ ಉದ್ದೇಶ ಯಾವುದೇ ಅರ್ಹ ಮತದಾರ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ತಿಳಿಸಿದರು. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಎಲ್ಲಾ ಸರ್ಕಾರಿ ನೌಕರರು ಪ್ರಜಾಪ್ರತಿನಿಧಿತ್ವಕಾಯ್ದೆ 1951ರ ಕಲಂ […]

Continue Reading

ತುಮಕೂರು: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನೀಲನಕ್ಷೆ: ಡಾ.ಜಿ.ಪರಮೇಶ್ವರ್

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನೀಲನಕ್ಷೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ Tumkur news ತುಮಕೂರು: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಮುಖ್ಯಮಂತ್ರಿಯವರು ನೀಲನಕ್ಷೆ ಇಟ್ಟುಕೊಂಡಿದ್ದು ಅದನ್ನು ಸಾಕಾರಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಹಾಗೂ ಕ್ರೀಡಾ ಸಚಿವರೂ ಆದ ಅವರು, ಶ್ರೀ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭಾನುವಾರ ಭೇಟಿನೀಡಿದರು. ಮಠಕ್ಕೆ ಭೇಟಿ ನೀಡಿ ಲಿಂ. ಶ್ರೀ ಶಿವಕುಮಾರಸ್ವಾಮೀಜಿಯವರ ಗದ್ದುಗೆಗೆ ಭೇಟಿ ನೀಡಿ […]

Continue Reading

ತುಮಕೂರು: ರಾಜ್ಯದಲ್ಲಿ ಶಾಂತಿ, ಅಭಿವೃದ್ಧಿ ಹಾಗೂ ಯುವಕರಿಗೆ ಉದ್ಯೋಗ ಇದು ನಮ್ಮ ಆದ್ಯತೆ: ಪರಮೇಶ್ವರ್

ತುಮಕೂರು ಮಹಾನಗರ ಪಾಲಿಕೆಯ ಈ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಯನ್ನು ತಮ್ಮ ಸ್ವಂತ ಖರ್ಚಿನಿಂದ ನಿರ್ಮಿಸಲಾಗಿದೆ. ಅಂತೆಯೇ ಇಂದು ಕಾಂಪೌಂಡ್‌ ಗೋಡೆಗೆ ಶಿಲಾನ್ಯಾಸ ಮಾಡಲಾದ ಡಾ.ಬಾಬು ಜಗಜೀವನ್‌ರಾಮ್‌ ಭವನದ ಮುಂಭಾಗ ತಮ್ಮ ಸ್ವಂತ ಖರ್ಚಿನಿಂದ ಜಗಜೀವನ್‌ರಾಮ್‌ ಪ್ರತಿಮೆ ನಿರ್ಮಿಸಲಾಗುವುದು. -ಡಾ.ಜಿ ಪರಮೇಶ್ವರ್ Tumkur news ತುಮಕೂರು: ರಾಜ್ಯದಲ್ಲಿ ಶಾಂತಿ, ಅಭಿವೃದ್ಧಿ ಹಾಗೂ ಯುವಕರಿಗೆ ಉದ್ಯೋಗಾವಕಾಶ ಇದು ಉಳಿದ ಎರಡು ವರ್ಷಗಳಲ್ಲಿ ನಮ್ಮ ಆದ್ಯತೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ಜಿಲ್ಲಾಡಳಿತ, ತುಮಕೂರು ಮಹಾನಗರ […]

Continue Reading

ತುಮಕೂರು: ಅಮಾನಿಕೆರೆ ಪಾರ್ಕ್‌ನಲ್ಲಿ 500 ಟಬೂಬಿಯಾ ಗಿಡ: ಪರಮೇಶ್ವರ್

ಅಮಾನಿಕೆರೆ ಪಾರ್ಕ್‌ನಲ್ಲಿ 500 ಟಬೂಬಿಯಾ ಗಿಡ ‘ಸಸಿ ಸಂಕಲ್ಪ 2026’ ಕಾರ್ಯಕ್ರಮದಲ್ಲಿ ಡಿಸಿಎಂ ಜಿ.ಪರಮೇಶ್ವರ ಚಾಲನೆ -ಅಕ್ಕ ತಂಗಿ ಕೆರೆ ಪಾರ್ಕ್ ಅಭಿವೃದ್ಧಿಗೂ ಸೂಚನೆ Tumkur news ತುಮಕೂರು: ನಗರದ ಐತಿಹಾಸಿಕ ‘ಅಕ್ಕ ತಂಗಿ ಕೆರೆ’ಯನ್ನು ಸ್ವಚ್ಛಗೊಳಿಸಿ, ಕೆರೆ ಬಳಿ ಸುಂದರವಾದ ಉದ್ಯಾನವನ ಅಭಿವೃದ್ಧಿ ಮಾಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಹೇಳಿದರು. ತುಮಕೂರು ಜಿಲ್ಲಾಡಳಿತ, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ನಗರದ ಅಮಾನಿಕೆರೆ ಪಾರ್ಕ್‌ನಲ್ಲಿ ಭಾನುವಾರ […]

Continue Reading

ತುಮಕೂರು: ಜಿಲ್ಲೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಟಾಸ್ಕ್‌ಫೋರ್ಸ್‌: ಡಿಸಿಎಂ ಡಾ.ಜಿ.ಪರಮೇಶ್ವರ

ಜಿಲ್ಲೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಟಾಸ್ಕ್‌ಫೋರ್ಸ್‌: ಡಿಸಿಎಂ ಡಾ.ಜಿ.ಪರಮೇಶ್ವರ Tumkur news ತುಮಕೂರು: ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಡಾಸ್ಕ್‌ ಫೋರ್ಸ್‌ ರಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಸಮಯ ವ್ಯರ್ಥ ಮಾಡದೆ, ಮುಖ್ಯಮಂತ್ರಿ ಹಾಗೂ ತಾವು ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ತುಮಕೂರು ಜಿಲ್ಲೆಯ ಪ್ರಗತಿ ಪರಿಶೀಲನೆ […]

Continue Reading

ತುಮಕೂರು: ಕಲ್ಪತರು ನಾಡಿನಲ್ಲಿ ಧೂಳೆಬ್ಬಿಸಿದ ಸಿಎಂ, ಡಿಸಿಎಂ

ಕಲ್ಪತರು ನಾಡಿನಲ್ಲಿ ಧೂಳೆಬ್ಬಿಸಿದ ಸಿಎಂ, ಡಿಸಿಎಂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಜಿಲ್ಲೆಗೆ ಮೊದಲ ಭೇಟಿ Tumkur news ತುಮಕೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅಧಿಕಾರ ಸ್ವೀಕರಿಸಿದ ಬಳಿಕ ಇದೇ‌ ಮೊದಲ ಬಾರಿಗೆ ಶನಿವಾರ ಜಿಲ್ಲೆಗೆ ಆಗಮಿಸಿ ಸಂಚಲನ ಸೃಷ್ಟಿಸಿದರು. ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಜಿಲ್ಲೆಯನ್ನು ಪ್ರವೇಶಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಶಾಸಕ ಡಾ. ಎಚ್.ಡಿ ರಂಗನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕುಣಿಗಲ್’ನಲ್ಲಿ ಭರ್ಜರಿಯಾಗಿ […]

Continue Reading

ತುಮಕೂರು: ವಾಣಿಜ್ಯ ಮತ್ತು ಕೈಗಾರಿಕಾ ಸಮ್ಮೇಳನ ಉದ್ಘಾಟಿಸಿದ ಸಚಿವ ವಿ.ಸೋಮಣ್ಣ

ದೇಶದ ಆರ್ಥಿಕ ಪ್ರಗತಿಗೆ ವಾಣಿಜ್ಯ, ಕೈಗಾರಿಕೆಗಳ ಕೊಡುಗೆ ಅಪಾರ: ವಾಣಿಜ್ಯ ಮತ್ತು ಕೈಗಾರಿಕಾ ಸಮ್ಮೇಳನ ಉದ್ಘಾಟಿಸದ ಸಚಿವ ವಿ.ಸೋಮಣ್ಣ Tumkur news ತುಮಕೂರು: ಉತ್ಪಾದನೆ ಮತ್ತು ಉದ್ಯೋಗ ಸೃಷ್ಟಿ ಮೂಲಕ ಕೈಗಾರಿಕೆಗಳು ದೇಶದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರು ವಾಣಿಜ್ಯ ಮತ್ತು ಕೈಗಾರಿಕೆಗಳ ಬೆಳವಣಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಸಹಕರಿಸಿದ್ದಾರೆ. ಈ ಮೂಲಕ ಶಕ್ತಿಯುತ ಭಾರತ ನಿರ್ಮಾಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆಗಳು ಸಹಕರಿಸುತ್ತಿವೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ […]

Continue Reading