ತುಮಕೂರು: ವಿಧಾನ ಪರಿಷತ್ ಸದಸ್ಯರಾಗಿ ನಜೀರ್‌ ಅಹ್ಮದ್ ನೇಮಕಕ್ಕೆ ಮನವಿ

ತಾಲ್ಲೂಕು ತುಮಕೂರು ನಗರ ರಾಜಕೀಯ

ವಿಧಾನ ಪರಿಷತ್ ಸದಸ್ಯರಾಗಿ ನಜೀರ್‌ಅಹ್ಮದ್ ನೇಮಕಕ್ಕೆ ಮನವಿ

Tumkurnews
ತುಮಕೂರು: ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ನಿಷ್ಠಾವಂತ ಮುಖಂಡ, ಅಖಿಲ ಕರ್ನಾಟಕ ಡಾ.ಜಿ. ಪರಮೇಶ್ವರ್‌ ಯುವ ಸೇನೆ ರಾಜ್ಯ ಗೌರವಾಧ್ಯಕ್ಷ ಬಾಗಲಕೋಟೆ ಜಿಲ್ಲೆಯ ನಜೀರ್‌ಅಹ್ಮದ್‌ ಅಬ್ಬಾಸ್‌ ಅಲಿ ಕಂಗನೊಳ್ಳಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ ಅಖಿಲ ಕರ್ನಾಟಕ ಡಾ.ಜಿ. ಪರಮೇಶ್ವರ್‌ ಯುವ ಸೇನೆ ಅಧ್ಯಕ್ಷ ನಗುತಾ ರಂಗನಾಥ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಬುಧವಾರ ನಗರದಲ್ಲಿ ಪತ್ತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಜೀರ್‌ಅಹ್ಮದ್‌ ಅವರು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷರಾಗಿ, ಕೆ.ಪಿ.ಸಿ.ಸಿ ಸದಸ್ಯರಾಗಿ ಹಲವಾರು ವರ್ಷಗಳಿಂದ ಪಕ್ಷದ ಸಂಘಟಣೆಗೆ ಕೆಲಸ ಮಾಡುತ್ತಿದ್ದಾರೆ. ಉತ್ತಮ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಜವಳಿ ಕ್ಷೇತ್ರದಲ್ಲಿ ರಾಜ್ಯಾದ್ಯಂತ ಅತ್ಯುತ್ತಮ ಕಾರ್ಯಮಾಡಿದ್ದಾರೆ. ಇವರ ಪಕ್ಷ ನಿಷ್ಠೆ ಪರಿಗಣಿಸಿ ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ವಿನಂತಿಸಿದರು.
ಬಾಗಲಕೋಟ ಜಿಲ್ಲಾ ಯುವ ಕಾಂಗ್ರೆಸ್ ಸಮೀತಿಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಏಳಿಗೆಗೆ ಹಲವಾರು ಸಂಘಟನಾತ್ಮಕ ಕಾರ್ಯಗಳನ್ನು ಕೈಗೊಂಡಿದ್ದು, ಯುವ ಕಾಂಗ್ರೇಸ್ ಸಮಾವೇಶಗಳು ವಿವಿಧ ರೀತಿಯ ಶಿಬಿರಗಳನ್ನು ಆಯೋಜಿಸಿದ್ದಾರೆ. ತುಂಗ ಭದ್ರಾ ಕಾಡಾ ಯೋಜನೆಯ ಸದಸ್ಯರಾಗಿ ಒಳನಾಡು ಮೀನುಗಾರರ ಏಳಿಗೆಗೆ ಶ್ರಮಿಸಿದ್ದಾರೆ. ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡಿಜನರ ವಿಶ್ವಾಸ ಗಳಿಸಿದ್ದಾರೆ. ಬಾಗಲಕೋಟ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಮುಸ್ಲಿಂ ಅಲ್ಪಸಂಖ್ಯಾತರಿಗೆ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸ್ಥಾನಮಾನ ಸಿಕ್ಕಿಲ್ಲ, ನಜೀರ್‌ಅಹ್ಮದ್‌ ಅವರಿಗೆ ನೀಡುವ ಮೂಲಕ ಪ್ರಾತಿನಿಧ್ಯ ನೀಡಬೇಕು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಬೆಂಬಲ ನೀಡಿ, ಪರಿಷತ್ ಸದಸ್ಯರನ್ನಾಗಿ ಮಾಡಲು ಸಹಕರಿಸಬೇಕು ಎಂದು ನಗುತಾರಂಗನಾಥ್‌ ಕೋರಿದರು.
ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್‌ ಯುವ ಸೇನೆ ಜಿಲ್ಲಾಧ್ಯಕ್ಷ ಬಾಬು ಪ್ರಕೃದ್ಧೀನ್, ಉಪಾಧ್ಯಕ್ಷ ಜಬ್ಬರ್, ಮುಖಂಡ ಸಾಗರ್‌ ಅವರು ಮಾತನಾಡಿ, ನಜೀರ್‌ ಅಹ್ಮದ್‌ ಅಬ್ಬಾಸ್ ಅಲಿ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಿದರೆ, ಪಕ್ಷದ ಬೆಳವಣಿಗೆಗೆ ಸಹಕಾರಿಯಾಗುತ್ತದೆ, ನಜೀರ್‌ ಅವರನ್ನು ಈಗ ಖಾಲಿ ಇರುವ ವಿಧಾನ ಪರಿಷತ್ತ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡುವಂತೆ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆ.ಪಿ.ಸಿ.ಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಅವರಿಗೆ ಮನವಿ ಮಾಡುವುದಾಗಿ ಹೇಳಿದರು.

ತುಮಕೂರು: ರಾಹುಲ್ ಗಾಂಧಿ ವಿರುದ್ಧ ಎಫ್.ಐ.ಆರ್ ದಾಖಲು: ಕಾಂಗ್ರೆಸ್ ಖಂಡನೆ

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *