ತುಮಕೂರು: ಎನ್.ಡಿ.ಎ ಅಭ್ಯರ್ಥಿ ಪರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತಯಾಚನೆ

Uncategorised

ಎನ್.ಡಿ.ಎ ಅಭ್ಯರ್ಥಿ ಪರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತಯಾಚನೆ

ಪದವಿಧರ ಕ್ಷೇತ್ರ ಅಭ್ಯರ್ಥಿ ಕೆ.ಎಂ.ಸುರೇಶ್ ಬೆಂಬಲಿಸಲು ಮನವಿ

Tumkurnews.in
ತುಮಕೂರು: ಸರ್ಕಾರದಲ್ಲಿ ಶಿಕ್ಷಕರ ಪರವಾದ ನೀತಿಗಳನ್ನು ರೂಪಿಸುವಲ್ಲಿ ಬಿಜೆಪಿ ಶಾಸಕರು ಹೆಚ್ಚು ಆಸಕ್ತಿವಹಿಸಿದ್ದಾರೆ. ಆಗ್ನೇಯ ಶಿಕ್ಷಕರ ಹಾಗೂ ಪದವಿಧರ ಕ್ಷೇತ್ರದ ಬಿಜೆಪಿಯ ವಿಧಾನ ಪರಿಷತ್ ಸದಸ್ಯರು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಈ ಬಾರಿ ಪದವಿಧರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ಕೆ.ಎಂ. ಸುರೇಶ್ ಅವರು ಶಿಕ್ಷಕರ ಪರವಾಗಿ ಕಾಳಜಿ ಹೊಂದಿದು, ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಯ್ಕೆ ಮಾಡುವಂತೆ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಶಿಕ್ಷಕರಿಗೆ ಮನವಿ ಮಾಡಿದರು.
ಆಗ್ನೇಯ ಪದವಿಧರರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಅವರ ಪರವಾಗಿ ಶಾಸಕರು ನಗರದ ವಿವಿಧ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿಗಳಿಗೆ ತೆರಳಿ ಪದವೀಧರ ಮತದಾರರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು.
ಅಭಿವೃದ್ಧಿಯ ಪರಿಕಲ್ಪನೆಯಲ್ಲಿ ದೇಶದ ಅಭಿವೃದ್ಧಿ, ಸುಭ್ರತೆಗೆ ಒತ್ತು ನೀಡಿ ಉತ್ತಮ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯಾಗಿ ಸಜ್ಜನ ವ್ಯಕ್ತಿ ಸುರೇಶ್ ಅವರು ಆಗ್ನೇಯ ಪದವಿಧರರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದಾರೆ. ಶಿಕ್ಷಣ ಸಂಸ್ಥೆ ಹೊಂದಿರುವ ಇವರಿಗೆ ಶಿಕ್ಷಕರ ಸಮಸ್ಯೆಗಳ ಅರಿವಿದೆ. ಈ ಕ್ಷೇತ್ರದಿಂದ ಆಯ್ಕೆಯಾದ ಬಿಜೆಪಿ ಸದಸ್ಯರು ಪರಿಷತ್ತಿನಲ್ಲಿ ಶಿಕ್ಷಕರ ಪರವಾಗಿ ಧ್ವನಿ ಮಾಡಿದ್ದಾರೆ. ಶಿಕ್ಷಕರ ಪರವಾದ ಅನೇಕ ನೀತಿಗಳು ರೂಪುಗೊಳ್ಳಲು ಕಾಳಜಿ ವಹಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಶಿಕ್ಷಕರಿಗೆ ಹಾಗೂ ಸರ್ಕಾರಿ ನೌಕರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ನೆರವಾಗಿದ್ದರು ಎಂದು ಹೇಳಿದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು, ಕೆ.ಎಂ.ಸುರೇಶ್ ಅವರಿಗೆ ಮತ ನೀಡಿಅಧಿಕ ಮತಗಳ ಅಂತರದಿಂದ ಚುನಾಯಿತರಾಗಲು ಸಹಕರಿಸಬೇಕು ಎಂದು ಕೋರಿದರು.
ಆರ್ಯಭಾರತಿ ಪಾಲಿಟೆಕ್ನಿಕ್, ಸಪ್ತಗಿರಿ ಪದವಿ ಪೂರ್ವ ಕಾಲೇಜು, ಕೇಂಬ್ರಿಡ್ಜ್ ವಿದ್ಯಾಸಂಸ್ಥೆ ಮತ್ತಿತರ ಶಿಕ್ಷಣ ಸಂಸ್ಥೆಗಳು, ವಿವಿಧ ಸರ್ಕಾರಿ ಕಚೇರಿಗಳಿಗೆ ತೆರಳಿ ಶಾಸಕರು ಎನ್‌ಡಿಎ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದರು.
ಆರ್ಯಭಾರತಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸತ್ಯನಾರಾಯಣ, ನಗರ ಪಾಲಿಕೆ ಮಾಜಿ ಸದಸ್ಯ ಸಿ.ಎನ್.ರಮೇಶ್, ತುಮಕೂರು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಟಿ.ಎಸ್.ಸುನಿಲ್‌ಪ್ರಸಾದ್, ಮುಖಂಡರಾದ ರವಿಕುಮಾರ್, ಯತೀಶ್‌ಗೌಡ, ರಮೇಶ್ ನಾಯಕ್ ಮೊದಲಾದವರು ಪ್ರಚಾರದಲ್ಲಿ ಭಾಗವಹಿಸಿದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *