ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ : ಕಾಮಗಾರಿಗಳ ಪರಿಶೀಲನೆ
Tumkurnews.in
ತುಮಕೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ಶಿರಾ ತಾಲ್ಲೂಕಿನ ಹಾಲೇನಹಳ್ಳಿ ಮತ್ತು ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ಕೈಗೊಂಡರು.
ಮೊದಲು ಹಾಲೇನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು, ವಿಬಿ-ಜಿ ರಾಮ್ ಜಿ ಯೋಜನೆ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಯೋಗೇಶ್ ಅವರ ಜಮೀನಿನಲ್ಲಿ ಅನುಷ್ಟಾನ ಮಾಡಿಕೊಂಡಿರುವ ರೇಷ್ಮೆ ಕಾಮಗಾರಿ, ರಂಗಪ್ಪ ಅವರ ಜಮೀನಿನಲ್ಲಿ ಅನುಷ್ಟಾನ ಮಾಡಿಕೊಂಡಿರುವ ಕೃಷಿಹೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು.
ನಂತರ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ ಅವರು, ಗ್ರಾಮ ಪಂಚಾಯಿತಿಗೆ ಸಲ್ಲಿಕೆಯಾದ ಸಾರ್ವಜನಿಕ ಅರ್ಜಿ ವಿಲೇವಾರಿ, ಬೀದಿ ದೀಪ, ಕುಡಿಯುವ ನೀರು, ಇ-ಸ್ವತ್ತು ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಿದರು.
ತದನಂತರ ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ, ಕಾರ್ಪೇಹಳ್ಳಿ ಗ್ರಾಮದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಅನುಷ್ಟಾನ ಮಾಡಿಕೊಂಡಿರುವ ಹಲಸಿನ ತೋಟದ ಕಾಮಗಾರಿ ಪರಿಶೀಲಿಸಿ, ರೈತರೊಟ್ಟಿಗೆ ಸಂವಹನ ನಡೆಸಿದರು.
ಮುಂದುವರೆದು ಕಾರ್ಪೇಹಳ್ಳಿ ವಡ್ಡರಹಟ್ಟಿ ಹಾಗೂ ಗೊಲ್ಲರಹಟ್ಟಿ ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿಯಿಂದ ನೀರು ಸರಬರಾಜು ಮಾಡುತ್ತಿರುವ ಸ್ಥಳ ಹಾಗೂ ವಿಫಲಗೊಂಡಿರುವ ಕೊಳವೆಬಾವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಜೊತೆಗೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಬಗ್ಗೆ ಪರಿಶೀಲಿಸಿದರು.
ಈ ವೇಳೆ ಗ್ರಾಮಸ್ಥರು ನೀರಿನ ಕೊರತೆ ಇರುವ ಬಗ್ಗೆ ಮನವಿ ಮಾಡಿದಾಗ, ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಿರಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಕೃಷಿ ಇಲಾಖೆ ಸಹಾಯಕ ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯ ಪಾಲಕ ಅಭಿಯಂತರರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ತಿಮ್ಮರಾಜನಹಳ್ಳಿ ಗ್ರಾಮ ಪಂಚಾಯಿತಿಗೆ ದಿಢೀರ್ ಭೇಟಿ : ತುಮಕೂರು ತಾಲೂಕು ತಿಮ್ಮರಾಜನಹಳ್ಳಿ ಗ್ರಾಮ ಪಂಚಾಯಿತಿಗೆ ದಿಢೀರ್ ಭೇಟಿ ನೀಡಿದ ಸಿಇಒ ಅಶ್ವಿಜ, ವಿಬಿಜಿ ರಾಮ್ ಜಿ, ಸ್ವಚ್ಛ ಭಾರತ ಮಿಷನ್, ಜಲಜೀವನ ಮಿಷನ್, ತೆರಿಗೆ ವಸೂಲಾತಿ ಸೇರಿದಂತೆ ಹಲವು ಕಡತಗಳನ್ನು ಪರಿಶೀಲಿಸಿದರು.
Tumkur Tourism | ತುಮಕೂರು ಪ್ರವಾಸೋದ್ಯಮ: ಬೆಟ್ಟ, ಕೋಟೆ, ಭಕ್ತಿ ಮತ್ತು ಗ್ರಾಮೀಣ ಬದುಕಿನ ಸೊಬಗು
What do you feel about this post?
Like
Love
Happy
Haha
Sad
