ಕರವೇ ತಾಲ್ಲೂಕು ಪದಾಧಿಕಾರಿಗಳ ನೇಮಕ

ಜಿಲ್ಲಾ ಸುದ್ದಿ ತುಮಕೂರು ನಗರ ಪ್ರಮುಖ ಸುದ್ದಿ

ಕರವೇ ತಾಲ್ಲೂಕು ಪದಾಧಿಕಾರಿಗಳ ನೇಮಕ

tumkurnews.in
ತುಮಕೂರು: ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಯಾವುದೇ ಹೋರಾಟಕ್ಕೆ ಸಿದ್ಧರಿರಬೇಕು. ನಮ್ಮ ರಾಜ್ಯಾಧ್ಯಕ್ಷರಾದ ನಾರಾಯಣಗೌಡರ ಮಾರ್ಗದರ್ಶನದಲ್ಲಿ ವೇದಿಕೆಯನ್ನು ಸಂಘಟನೆ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತುಮಕೂರು ತಾಲ್ಲೂಕು ಅಧ್ಯಕ್ಷ ಲಿಂಗರಾಜು ಹೇಳಿದರು.
ಭಾನುವಾರ ನಗರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ(ನಾರಾಯಣಗೌಡರ ಬಣ) ತುಮಕೂರು ತಾಲೂಕು ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಮ್ಮ ವೇದಿಕೆ ಸದಸ್ಯರು ಕನ್ನಡದ ಕಟ್ಟಾಳುಗಳಾಗಿ ನಮ್ಮ ನಾಡು, ನುಡಿ, ನೆಲ, ಜಲ, ಕನ್ನಡಿಗರ ಹಿತರಕ್ಷಣೆಗೆ ಸಂಕಲ್ಪ ಮಾಡಬೇಕು. ಜಿಲ್ಲೆಯ ನೀರಾವರಿ ಸಮಸ್ಯೆ, ರೈತರ ಸಂಕಷ್ಟ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.
ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ಘಟಕದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ತುಮಕೂರು ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಜುನೇದ್, ತಾಲ್ಲೂಕು ಉಪಾಧ್ಯಕ್ಷರಾದ ಮಹಾಲಿಂಗಯ್ಯ ಡಿ, ನಾರಾಯಣಮೂರ್ತಿ, ತಾಲ್ಲೂಕು ಗೌರವಾಧ್ಯಕ್ಷ ಸಿಬಗತುಲ್ಲಾ, ತಾಲ್ಲೂಕು ಕಾರ್ಮಿಕ ಘಟಕ ಅಧ್ಯಕ್ಷ ಮಂಜುನಾಥ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಮೊಹಮ್ಮದ್ ಜೈದ್, ತಾಲ್ಲೂಕು ಯುವ ಘಟಕದ ಅಧ್ಯಕ್ಷರು ಅಬ್ಬಲ್ ಪಾಶ, ಹೆಬ್ಬೂರು ಹೋಬಳಿ ಅಧ್ಯಕ್ಷರಾಗಿ ನೇಮಕವಾದ ಶ್ರೀನಿವಾಸ್ ಸೋಪನಹಳ್ಳಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *