ತಂಗನಹಳ್ಳಿ ಶ್ರೀಕಾಶಿ ಅನ್ನಪೂರ್ಣೇಶ್ವರಿ ಮಠದಲ್ಲಿ ದುರ್ಗಾ ಪೂಜೆ: ವಿವಿಧ ಮಠಗಳ ಸ್ವಾಮೀಜಿಗಳ ಭಾಗಿ
tumkurnews.in
ತುಮಕೂರು: ಕೊರಟಗೆರೆ ತಾಲ್ಲೂಕಿನ ತಂಗನಹಳ್ಳಿಯ ಶ್ರೀಕಾಶಿ ಅನ್ನಪೂರ್ಣೇಶ್ವರಿ ಮಹಾಸಂಸ್ಥಾನ ಮಠದಲ್ಲಿ ಪೀಠಾಧ್ಯಕ್ಷರಾದ ಶ್ರೀ ಬಸವಮಹಾಲಿಂಗ ಮಹಾಸ್ವಾಮೀಜಿ ನೇತೃತ್ವದಲ್ಲಿ ನಡೆದ ದುರ್ಗಾ ಪೂಜೆಯಲ್ಲಿ ಹರಿಹರದ ಶ್ರೀ ವಚನಾನಂದ ಸ್ವಾಮೀಜಿ, ಚಿತ್ರದುರ್ಗ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕಲ್ಬುರ್ಗಿಯ ಶ್ರೀ ಸಿದ್ದಬಸವ ಕಬೀರ ಸ್ವಾಮೀಜಿ, ಡಾ. ಶ್ರೀ ಬಸವ ಮರುಳ ಸಿದ್ದ ಸ್ವಾಮೀಜಿ, ಚಿಗರಹಳ್ಳಿ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ, ಹಾವೇರಿಯ ಶ್ರೀ ಬಸವ ಶಾಂತಲಿಂಗ ಸ್ವಾಮೀಜಿ, ಸೋಮನಹಳ್ಳಿ ಸಿದ್ದಾರೂಢ ಮಠದ ಶ್ರೀ ಜಯದೇವ ಸ್ವಾಮೀಜಿ ಮತ್ತಿತರರು ಭಾಗವಹಿಸಿದ್ದರು.
