ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ : ಮತ ಚಲಾಯಿಸಲು ಗುರುತಿನ ಚೀಟಿ ಕಡ್ಡಾಯ

ಜಿಲ್ಲಾ ಸುದ್ದಿ ತುಮಕೂರು ನಗರ ಪ್ರಮುಖ ಸುದ್ದಿ ರಾಜಕೀಯ

ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ : ಮತ ಚಲಾಯಿಸಲು ಗುರುತಿನ ಚೀಟಿ ಕಡ್ಡಾಯ

Tumkurnews.in
ತುಮಕೂರು: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-೨೦೨೬ರ ಸಂಬಂಧ ಮತದಾನದ ದಿನದಂದು(ಅ.23) ಮತದಾರರ ಗುರುತಿಗಾಗಿ ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಪರ್ಯಾಯ ೧೦ ಗುರುತಿನ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಮೂಲ ಪ್ರತಿಯಲ್ಲಿ ಹಾಜರುಪಡಿಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಿದೆ.
ಆಧಾರ್ ಕಾರ್ಡ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಭಾರತೀಯ ಪಾಸ್‌ಪೋರ್ಟ್, ರಾಜ್, ಕೇಂದ್ರ ಸರ್ಕಾರ, ಸಾರ್ವಜನಿಕ ವಲಯದ ಉದ್ಯಮಗಳು, ಸ್ಥಳೀಯ ಸಂಸ್ಥೆಗಳು ಅಥವಾ ಖಾಸಗಿ ಕೈಗಾರಿಕಾ ಸಂಸ್ಥೆಗಳು ತಮ್ಮ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿ, ಸಂಬಂಧಪಟ್ಟ ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರು ಉದ್ಯೋಗದಲ್ಲಿರುವ ಶಿಕ್ಷಣ ಸಂಸ್ಥೆಗಳು ನೀಡಿರುವ ಸೇವಾ ಗುರುತಿನ ಚೀಟಿ, ವಿಶ್ವವಿದ್ಯಾನಿಲಯವು ನೀಡಿರುವ ಪದವಿ, ಡಿಪ್ಲೋಮಾ ಪ್ರಮಾಣಪತ್ರ(ಮೂಲ ಪ್ರತಿ), ಸಕ್ಷಮ ಪ್ರಾಧಿಕಾರವು ನೀಡಿರುವ ವಿಕಲಚೇತನ ಪ್ರಮಾಣ ಪತ್ರ(ಮೂಲ ಪ್ರತಿ), ಯುಡಿಐಡಿ ಕಾರ್ಡ್ ನಲ್ಲಿ ಯಾವುದಾದರೂ ಒಂದನ್ನು ಮೂಲ ಪ್ರತಿಯಲ್ಲಿ ಹಾಜರುಪಡಿಸಿ ಮತ ಚಲಾಯಿಸಬಹುದು.
ಚಿತ್ರ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ತುಮಕೂರು ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಮತಪೆಟ್ಟಿಗೆಗಳನ್ನು ಕೊಂಡೊಯ್ಯಲಾಯಿತು.

Leave a Reply

Your email address will not be published. Required fields are marked *