ಅ.30ರಂದು ರಫ್ತು ಪ್ರೋತ್ಸಾಹ ಕಾರ್ಯಾಗಾರ
Tumkurnews.in
ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಅಕ್ಟೋಬರ್ 30 ರಂದು ಬೆಳಗ್ಗೆ 9.30 ಗಂಟೆಗೆ ಡಿ.ಐ.ಸಿ. ಹಾಲ್, ಜಿಲ್ಲಾ ಕೈಗಾರಿಕಾ ಕೇಂದ್ರ, ತುಮಕೂರು ಇಲ್ಲಿ ಜವಳಿ ವಲಯದ ರಫ್ತು ಉದ್ದಿಮೆದಾರರಿಗೆ ಒಂದು ದಿನದ ರಫ್ತು ಪ್ರೋತ್ಸಾಹ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ತುಮಕೂರು-೫೭೨೧೦೨ ಅಥವಾ ದೂ.ವಾ.ಸಂ.೦೮೧೬-೨೨೭೫೩೭೦ಯನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
