ಸಿದ್ಧಗಂಗಾ ಮಠಕ್ಕೆ ಕೆ.ಎಂ. ಸುರೇಶ್ ಭೇಟಿ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ಸಿದ್ಧಗಂಗಾ ಮಠಕ್ಕೆ ಕೆ.ಎಂ. ಸುರೇಶ್ ಭೇಟಿ

Tumkurnews.in

ತುಮಕೂರು: ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾಯಿತರಾದ ಕೆ.ಎಂ. ಸುರೇಶ್ ಅವರು ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರೊಂದಿಗೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಜೊತೆ ಶುಕ್ರವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ.ಎಂ. ಸುರೇಶ್ ಅವರು ೨೩ ಸಾವಿರಕ್ಕೂ ಹೆಚ್ಚು ದಾಖಲೆ ಮತಗಳ ಅಂತರದಿಂದ ಗೆಲುವು ಸಾಧಿಸಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದು, ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ.

ಶ್ರೀಮಠದಲ್ಲಿ ಡಾ. ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಸಿದ್ಧಲಿಂಗ ಸ್ವಾಮೀಜಿಗಳ ದರ್ಶನ ಪಡೆದು ಆಶೀರ್ವಾದ ಪಡೆದರು.

ಈ ವೇಳೆ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜೆಡಿಎಸ್‌ನ ಹಿರಿಯ ಮುಖಂಡ ಟಿ.ಎಲ್. ಕುಂಭಯ್ಯ, ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಆರ್. ನಾಗರಾಜು, ಜೆಡಿಎಸ್ ನಗರ ಅಧ್ಯಕ್ಷ ಟಿ.ಹೆಚ್. ಜಯರಾಮ್, ನಗರ ಕಾರ್ಯಾಧ್ಯಕ್ಷ ಮೋಹನ್‌ಕುಮಾರ್, ಬಿಜೆಪಿ ನಗರ ಅಧ್ಯಕ್ಷ ಧನುಷ್, ನಗರ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ವಿರೂಪಾಕ್ಷಪ್ಪ, ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ಬಿ.ಹೆಚ್. ವಸಂತ, ಮುಖಂಡರಾದ ಟಿ.ಆರ್. ಸದಾಶಿವಯ್ಯ, ಹಿಮಾನಂದ್, ಉಮಾಮಹೇಶ್, ಕುಮಾರಸ್ವಾಮಿ, ಸುನಿಲ್, ಗಣೇಶ್ ಮೊದಲಾದವರು ಹಾಜರಿದ್ದರು.

Leave a Reply

Your email address will not be published. Required fields are marked *