ಛಲವಾದಿ ಸಮುದಾಯದ ಸಾಧಕರ ಸನ್ಮಾನಕ್ಕೆ ಅರ್ಜಿ ಆಹ್ವಾನ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ಛಲವಾದಿ ಸಮುದಾಯದ ಸಾಧಕರ ಸನ್ಮಾನಕ್ಕೆ ಅರ್ಜಿ ಆಹ್ವಾನ

Tumkurnews.in

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನವೆಂಬರ್ 11ರಂದು ವೀರವನಿತೆ ಒನಕೆ ಓಬವ್ವ ಜಯಂತ್ಯುತ್ಸವ ಆಚರಿಸಲಾಗುತ್ತಿದೆ.

ಜಯಂತಿ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಛಲವಾದಿ ಸಮುದಾಯದ ಸಾಧಕರನ್ನು ಸನ್ಮಾನಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಸಾಧಕರು ಸ್ವವಿವರಗಳನ್ನೊಳಗೊಂಡ ಸ್ವಬರಹದ ಅರ್ಜಿಯನ್ನು ನವೆಂಬರ್ 6ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕ, ಬಾಳನಕಟ್ಟೆ, ತುಮಕೂರು ಈ ವಿಳಾಸಕ್ಕೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ 0816-2275204 ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ತಿಳಿಸಿದ್ದಾರೆ.

ವೇದಾಂತ್‌ಗೆ ಪಂದ್ಯ ಪುರುಷೋತ್ತಮ ಪ್ರಶಸ್ತಿ

ತುಮಕೂರು: ಬೆಂಗಳೂರಿನ ಕ್ರಿಕೆಟರ್ಸ್ ಅಕಾಡೆಮಿ ಆಯೋಜಿಸಿದ್ದ 14 ವರ್ಷ ವಯೋಮಾನದ ದಸರಾ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ತುಮಕೂರು ಅಕೇಷನಲ್ಸ್ ಕ್ರಿಕೆಟ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ತಂಡದ ನಾಯಕ ವೇದಾಂತ್ ಜಿ.ಎ. ಅವರು ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಉತ್ತಮ ಬೌಲರ್, ಉತ್ತಮ ಬ್ಯಾಟ್ಸ್‌ಮನ್, ಮೂರು ಬಾರಿ ಪಂದ್ಯ ಪುರುಷೋತ್ತಮ ಹಾಗೂ ಸರಣಿ ಪುರುಷೋತ್ತಮ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ವೇದಾಂತ್ ಅವರ ಸಾಧನೆಗೆ ಕೋಚ್ ಮಂಜುನಾಥ್, ಯಶವಂತ್, ಸುನಿಲ್ ಪಟೇಲ್ ಹಾಗೂ ಆಟಗಾರರಾದ ಪಿಯೂಶ್, ಪೂಜಿತ್ ಸೇರಿದಂತೆ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *