ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ದೀಪಾವಳಿ ಆಚರಣೆ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ದೀಪಾವಳಿ ಆಚರಣೆ

Tumkurnews.in

ತುಮಕೂರು: ಭಾರತೀಯ ಜನತಾ ಪಕ್ಷದ ಜಿಲ್ಲಾ ಕಚೇರಿಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಚೇರಿಯನ್ನು ದೀಪಗಳಿಂದ ಅಲಂಕರಿಸಲಾಗಿತ್ತು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ಉಪಾಧ್ಯಕ್ಷ ಹೆಚ್.ಎಂ. ರವೀಶಯ್ಯ, ಖಜಾಂಚಿ ಗಣೇಶ್ ಪ್ರಸಾದ್, ನಗರಾಧ್ಯಕ್ಷ ಧನುಷ್, ನಗರ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ವಿರೂಪಾಕ್ಷಪ್ಪ, ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ವಸಂತ, ಮುಖಂಡರಾದ ಊರುಕೆರೆ ವಿಜಯಕುಮಾರ್, ಕಿರ್ಲೋಸ್ಕರ್ ಕುಮಾರ್, ಹನುಮಂತರಾಜು, ಶೋಭಾ, ಅಭಿಲಾಶ್, ನಾಗರತ್ನ, ಕುಮುದ, ಅಂಬಿಕಾ, ಪ್ರೀತಂ ಜೈನ್, ಗಂಗೇಶ್, ಶಿವರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, “ದೀಪಾವಳಿ ಎಂದರೆ ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ಹಬ್ಬ. ಪಕ್ಷ ಹಾಗೂ ಕಾರ್ಯಕರ್ತರು ಜನರ ಬಾಳಿನಲ್ಲಿ ಬೆಳಕು ತರುವ ಕೆಲಸ ಮಾಡೋಣ” ಎಂದು ಕರೆ ನೀಡಿದರು.

Leave a Reply

Your email address will not be published. Required fields are marked *