ಆದರ್ಶ ಗ್ರಾಮ ಯೋಜನೆ ಮೋದಿಯವರ ದೊಡ್ಡ ಕೊಡುಗೆ: ವಿ. ಸೋಮಣ್ಣ
ಹೆತ್ತೇನಹಳ್ಳಿಯಲ್ಲಿ ಪಿಎಂ ಆದರ್ಶ ಗ್ರಾಮ ಯೋಜನೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ
Tumkurnews.in
ತುಮಕೂರು: ಗ್ರಾಮಗಳ ಅಭಿವೃದ್ಧಿ, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳ ಕಲ್ಪನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಯೋಜನೆಗಳ ಮೂಲಕ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯೂ ದೇಶಕ್ಕೆ ಮೋದಿ ಅವರು ನೀಡಿರುವ ಮಹತ್ವದ ಕೊಡುಗೆಯಾಗಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೆತ್ತೇನಹಳ್ಳಿಯಲ್ಲಿ ಭಾನುವಾರ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಮಂಜೂರಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿ ಗ್ರಾಮೀಣ ಭಾಗದ ಜನರು ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ಹಾಗೂ ಜಮೀನಿನಿಂದ ಮತ್ತೊಂದು ಜಮೀನಿಗೆ ತೆರಳಲು ಎದುರಿಸುತ್ತಿದ್ದ ತೊಂದರೆಗಳನ್ನು ನಿವಾರಿಸುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಅವುಗಳಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಗ್ರಾಮಗಳ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಆದರ್ಶ ಗ್ರಾಮ ಯೋಜನೆಯನ್ನು ರೂಪಿಸಿದ್ದಾರೆ ಎಂದರು.
ಹೆತ್ತೇನಹಳ್ಳಿ ಪವಿತ್ರ ಸ್ಥಳವಾಗಿದ್ದು, ಈ ಭಾಗದಲ್ಲಿ ಗೂಳೂರು ಗಣೇಶ, ಕೈದಾಳ ಚೆನ್ನಕೇಶವ ಹಾಗೂ ಹೆತ್ತೇನಹಳ್ಳಿ ಮಾರಮ್ಮ ದೇವಾಲಯಗಳು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾಗಿವೆ. ಇವುಗಳನ್ನು ಉತ್ತಮ ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಸಚಿವ ಸೋಮಣ್ಣ ಹೇಳಿದರು.
ಸೋಮಣ್ಣ ಅವರಿಂದ ಕ್ಷೇತ್ರದ ಅಭಿವೃದ್ಧಿಗೆ ವೇಗ:
ಶಾಸಕ ಬಿ. ಸುರೇಶ್ಗೌಡ ಮಾತನಾಡಿ, ಕೇಂದ್ರ ಸಚಿವರಾಗಿ ವಿ. ಸೋಮಣ್ಣ ಅವರು ಕೇವಲ ಎರಡೂವರೆ ವರ್ಷಗಳಲ್ಲಿ ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಪಂಡಿತನಹಳ್ಳಿ, ಮೈದಾಳ, ಹೆಗ್ಗೆರೆ ಹಾಗೂ ಮಳಸಂದ್ರದಲ್ಲಿ ನಾಲ್ಕು ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಹಲವು ವರ್ಷಗಳಿಂದ ಆಗಬೇಕಿದ್ದ ಅಭಿವೃದ್ಧಿ ಕೆಲಸಗಳನ್ನು ಅಲ್ಪಾವಧಿಯಲ್ಲೇ ಕೈಗೆತ್ತಿಕೊಂಡಿದ್ದಾರೆ. ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ಸುಮಾರು 500 ಕೋಟಿ ರೂ. ಅನುದಾನ ಒದಗಿಸಿದ್ದಾರೆ ಎಂದು ಹೇಳಿದರು.
ನಂದಿಹಳ್ಳಿಯಿಂದ ವಸಂತನರಸಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಸುಮಾರು 4,000 ಕೋಟಿ ರೂ. ಹಾಗೂ ದಾವಣಗೆರೆಯಿಂದ ವಸಂತನರಸಾಪುರದವರೆಗೆ 40 ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ ಸುಮಾರು 3,000 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಸೋಮಣ್ಣ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳೇ ಅವರ ಕಾರ್ಯವೈಖರಿಗೆ ಸಾಕ್ಷಿಯಾಗಿವೆ ಎಂದರು.
ಜಲಸಂಪನ್ಮೂಲ ಸಚಿವರಾಗಿದ್ದ ಸಂದರ್ಭದಲ್ಲಿ ಸೋಮಣ್ಣ ಅವರು ಗೂಳೂರು, ಹೆಬ್ಬೂರು ಹಾಗೂ ನಾಗಮಣಿ ಕೆರೆಗಳಿಗೆ ಸಂಬಂಧಿಸಿದಂತೆ ಚೆಕ್ಡ್ಯಾಂ ನಿರ್ಮಾಣಕ್ಕಾಗಿ ಸುಮಾರು 100 ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದ್ದರು. ಅದರಂತೆ ಈಗಾಗಲೇ 20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಉಳಿದ 100 ಕೋಟಿ ರೂ. ಅನುದಾನಕ್ಕೆ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.
ಶಿವಕುಮಾರ ಸ್ವಾಮೀಜಿಗಳು ವಿದ್ಯಾಭ್ಯಾಸ ಮಾಡಿದ್ದ ನಾಗವಲ್ಲಿ ಶಾಲೆಯಲ್ಲಿ ಅವರ ಹೆಸರಿನಲ್ಲಿ ಐದು ಕೊಠಡಿಗಳನ್ನು ನಿರ್ಮಿಸಿಕೊಡುವಂತೆ ಮನವಿ ಮಾಡಿದಾಗ, ಸೋಮಣ್ಣ ಅವರು 2 ಕೋಟಿ ರೂ. ಅನುದಾನ ಒದಗಿಸಿದ್ದಾರೆ. ಕೈದಾಳ ಚೆನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲಾಗಿದೆ. ದೇವಾಲಯದ ಜೀರ್ಣೋದ್ಧಾರ ಕಾರ್ಯವನ್ನು 15 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ವಿವರಿಸಿದರು.
ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ತುಮಕೂರು ಜಿಲ್ಲೆಗೆ ಸುಮಾರು 13
