ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

Tumkurnews.in

ತುಮಕೂರು: ಜಿಲ್ಲೆಯ ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯುವ ಸಂಘಗಳ ನೋಂದಣಿ ಪ್ರಗತಿ ಪರಿಶೀಲಿಸುವ ಉದ್ದೇಶದಿಂದ ಗೂಗಲ್ ಮೀಟ್ ಮೂಲಕ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ತಾಲ್ಲೂಕುವಾರು ಯುವ ಸಂಘಗಳ ನೋಂದಣಿ ಪಟ್ಟಿ ಹಾಗೂ ನೋಂದಣಿ ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿದರು.

ಇದುವರೆಗೆ ನೋಂದಣಿಯಾಗದ ಯುವ ಸಂಘಗಳನ್ನು ಗುರುತಿಸಿ, ಅವುಗಳ ಸದಸ್ಯರ ವಿವರಗಳನ್ನು ಸಂಗ್ರಹಿಸಬೇಕು. ಅಗತ್ಯ ದಾಖಲೆಗಳನ್ನು ಪಡೆದು ನೋಂದಣಿ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಯುವ ಸಂಘಗಳ ನೋಂದಣಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗದಂತೆ ತಾಲ್ಲೂಕುವಾರು ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ನಿಗದಿತ ಕಾಲಮಿತಿಯೊಳಗೆ ಎಲ್ಲಾ ಅರ್ಹ ಯುವ ಸಂಘಗಳ ನೋಂದಣಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Leave a Reply

Your email address will not be published. Required fields are marked *