ನ. 21ರಂದು ಕೊರಟಗೆರೆಯಲ್ಲಿ ಪ್ರಜಾಸೇವೆ ಅಭಿಯಾನ ಜನಸಭೆ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ನ. 21ರಂದು ಕೊರಟಗೆರೆಯಲ್ಲಿ ಪ್ರಜಾಸೇವೆ ಅಭಿಯಾನ ಜನಸಭೆ

Tumkurnews.in

ತುಮಕೂರು: ಉಪಮುಖ್ಯಮಂತ್ರಿ, ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 21ರಂದು ಬೆಳಗ್ಗೆ 11.30 ಗಂಟೆಗೆ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ಮಟ್ಟದ ‘ಪ್ರಜಾಸೇವೆ ಅಭಿಯಾನ ಜನಸಭೆ’ ಆಯೋಜಿಸಲಾಗಿದೆ. ಸಭೆಯಲ್ಲಿ ವಿವಿಧ ಜನಪ್ರತಿನಿಧಿಗಳು ಹಾಗೂ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಇದೇ ರೀತಿ ಜಿಲ್ಲೆಯ ಉಳಿದ ಎಂಟು ತಾಲ್ಲೂಕುಗಳಲ್ಲಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ನವೆಂಬರ್ 21ರಂದು ಬೆಳಗ್ಗೆ 10 ಗಂಟೆಗೆ ಪ್ರಜಾಸೇವೆ ಅಭಿಯಾನ ಜನಸಭೆ ನಡೆಯಲಿದೆ.

ಸಭೆ ನಡೆಯುವ ಸ್ಥಳಗಳ ವಿವರ:

  • ತುಮಕೂರು ತಾಲ್ಲೂಕು: ಮಲ್ಲಸಂದ್ರ ಗ್ರಾಮ ಪಂಚಾಯಿತಿ ಆವರಣ.

  • ಕುಣಿಗಲ್ ತಾಲ್ಲೂಕು: ಹುತ್ರಿದುರ್ಗ ಹೋಬಳಿಯ ಹಿರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಕ್ಕಸಾಗರ ಗ್ರಾಮದ ಶ್ರೀ ಅನಂತಶಯನಸ್ವಾಮಿ ದೇವಾಲಯದ ಆವರಣ.

  • ಗುಬ್ಬಿ ತಾಲ್ಲೂಕು: ಚೇಳೂರು ಹೋಬಳಿಯ ನಲ್ಲೂರು ಗ್ರಾಮ ಪಂಚಾಯಿತಿ ಸಮುದಾಯ ಭವನ.

  • ಮಧುಗಿರಿ ತಾಲ್ಲೂಕು: ಕಸಬಾ ಹೋಬಳಿಯ ಬಿಜವರ ಗ್ರಾಮ ಪಂಚಾಯಿತಿ ಆವರಣ.

  • ಶಿರಾ ತಾಲ್ಲೂಕು: ಹುಲಿಕುಂಟೆ ಹೋಬಳಿಯ ತಡಕಲೂರು ಗ್ರಾಮ ಪಂಚಾಯಿತಿ ಆವರಣ.

  • ಪಾವಗಡ ತಾಲ್ಲೂಕು: ತಾಲ್ಲೂಕು ಕಚೇರಿ ಆವರಣ.

  • ತಿಪಟೂರು ತಾಲ್ಲೂಕು: ನೊಣವಿನಕೆರೆ ಹೋಬಳಿಯ ನೆಲ್ಲಿಕೆರೆ ಗ್ರಾಮ ಪಂಚಾಯಿತಿ ಆವರಣ.

  • ಚಿಕ್ಕನಾಯಕನಹಳ್ಳಿ ತಾಲ್ಲೂಕು: ಹಂದನಕೆರೆ ಹೋಬಳಿಯ ಗ್ರಾಮ ಪಂಚಾಯಿತಿ ಆವರಣ.

  • ತುರುವೇಕೆರೆ ತಾಲ್ಲೂಕು: ದಂಡಿನಶಿವರ ಹೋಬಳಿಯ ಕೊಂಡಜ್ಜಿ ಕೆಂಪಮ್ಮ ದೇವಿ ದೇವಸ್ಥಾನದ ಆವರಣ.

ಸಾರ್ವಜನಿಕರು ಸಭೆಗಳಿಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ನ. 21ರಂದು ಶಿಕ್ಷಕರಿಗೆ ತಾಲ್ಲೂಕು ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ

ತುಮಕೂರು: ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗೆ ನವೆಂಬರ್ 21ರಂದು ತಾಲ್ಲೂಕು ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ ಆಯೋಜಿಸಲಾಗಿದೆ.

ನಗರದ ಬಿ.ಎಚ್. ರಸ್ತೆಯಲ್ಲಿರುವ ಶ್ರೀ ಸಿದ್ಧಗಂಗಾ ಎಲಿಮೆಂಟರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಪರ್ಧೆಗಳು ನಡೆಯಲಿವೆ. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬೆಳಗ್ಗೆ 11 ಗಂಟೆಗೆ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಮಧ್ಯಾಹ್ನ 2.30 ಗಂಟೆಗೆ ಸ್ಪರ್ಧೆ ಆರಂಭವಾಗಲಿದೆ.

ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ಪರ್ಧೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ನ. 20ರಂದು ವಿದ್ಯುತ್ ವ್ಯತ್ಯಯ

ತುಮಕೂರು: ಬೆಸ್ಕಾಂ ಯಡಿಯೂರು ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗದ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ನವೆಂಬರ್ 20ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಕೋಟೆಕೆರೆ, ಹೊಸೂರು, ಹೆಡ್ಡಿಗೆರೆ, ಶೆಟ್ಟಿಬೀಡು, ಯಳವರಹಟ್ಟಿ, ಜಿವಾಟಿಹಟ್ಟಿ, ತೆಂಗಿನಮರದಪಾಳ್ಯ, ಗುನ್ನಾಗೆರೆ, ಜಾಣಗೆರೆ ಹಾಗೂ ಬಂಡೀತಿಮ್ಮಯ್ಯನಪಾಳ್ಯ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಗ್ರಾಹಕರು ಸಹಕರಿಸುವಂತೆ ಬೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮನವಿ ಮಾಡಿದ್ದಾರೆ.

 

Leave a Reply

Your email address will not be published. Required fields are marked *