ಚಿಕ್ಕಣ್ಣಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿಪೂಜೆ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ಚಿಕ್ಕಣ್ಣಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿಪೂಜೆ

Tumkurnews.in

ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಐತಿಹಾಸಿಕ ಪ್ರಸಿದ್ಧ ಚಿಕ್ಕಣ್ಣದೇವರಹಟ್ಟಿಯಲ್ಲಿ ನಡೆಯಲಿರುವ ಚಿಕ್ಕಣ್ಣಸ್ವಾಮಿ ದೇವಸ್ಥಾನದ ನಿರ್ಮಾಣ ಕಾಮಗಾರಿಗೆ ಶಾಸಕ ಬಿ. ಸುರೇಶ್‌ಗೌಡ ಅವರು ಭೂಮಿಪೂಜೆ ನೆರವೇರಿಸಿದರು.

ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಶಾಸಕರು, ಚಿಕ್ಕಣ್ಣಸ್ವಾಮಿ ದೇವಸ್ಥಾನಕ್ಕೆ ಸುಮಾರು 500 ವರ್ಷಗಳ ಇತಿಹಾಸವಿದೆ. ಇಲ್ಲಿಗೆ ಬರುವ ಭಕ್ತರ ಕಷ್ಟಗಳನ್ನು ನಿವಾರಿಸುವ ಪುಣ್ಯಕ್ಷೇತ್ರವೆಂದು ಈ ದೇವಸ್ಥಾನ ಪ್ರಸಿದ್ಧಿ ಪಡೆದಿದೆ. ಬಹಳ ದಿನಗಳಿಂದ ಈ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ ಅಭಿವೃದ್ಧಿಪಡಿಸಬೇಕೆಂದು ಅಂದುಕೊಂಡಿದ್ದೆವು. ಆ ಸಮಯ ಈಗ ಬಂದಿದೆ ಎಂದು ಹೇಳಿದರು.

ದೇವಸ್ಥಾನದ ನಿರ್ಮಾಣಕ್ಕಾಗಿ ತಾವು 50 ಲಕ್ಷ ರೂ. ನೀಡುವುದಾಗಿ ತಿಳಿಸಿದ ಶಾಸಕರು, ಒಂದು ವರ್ಷದೊಳಗೆ ದೇವಸ್ಥಾನದ ಕಾಮಗಾರಿ ಸಂಪೂರ್ಣಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ದೇವಾಲಯಕ್ಕೆ ಭಕ್ತಾದಿಗಳು ಆಗಮಿಸಲು ಕುಣಿಗಲ್ ಮುಖ್ಯ ರಸ್ತೆಯಿಂದ ಶಾಂತಪುರ ಮಾರ್ಗವಾಗಿ ಚಿಕ್ಕಣ್ಣದೇವರಹಟ್ಟಿ ದೇವಸ್ಥಾನದವರೆಗೆ ಸಿ.ಸಿ. ರಸ್ತೆ ಹಾಗೂ ಸಿ.ಸಿ. ಚರಂಡಿ ನಿರ್ಮಾಣ ಕಾಮಗಾರಿಗೆ ಸರ್ಕಾರದಿಂದ ಅನುಮೋದನೆ ದೊರೆತಿದೆ. ಟೆಂಡರ್ ಪ್ರಕ್ರಿಯೆಯೂ ಮುಗಿದಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಸುರೇಶ್‌ಗೌಡ ತಿಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಸೇವಾ ಸಮಿತಿ ಟ್ರಸ್ಟ್‌ನ ಅಧ್ಯಕ್ಷ ಪಾಪಣ್ಣಸ್ವಾಮಿ, ಗೌರವಾಧ್ಯಕ್ಷ ಚಿಕ್ಕಣ್ಣಸ್ವಾಮಿ, ಕಾರ್ಯದರ್ಶಿ ಶಿವಕುಮಾರಸ್ವಾಮಿ ಹಾಗೂ ಸಮಿತಿಯ ಸದಸ್ಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *