ಲೀಲಾವತಿ ಅಶೋಕ್ ಅವರಿಗೆ ರಾಜ್ಯಮಟ್ಟದ ‘ಸಮಾಜ ಸೇವಾ ರತ್ನ’ ಪ್ರಶಸ್ತಿ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ಲೀಲಾವತಿ ಅಶೋಕ್ ಅವರಿಗೆ ರಾಜ್ಯಮಟ್ಟದ ‘ಸಮಾಜ ಸೇವಾ ರತ್ನ’ ಪ್ರಶಸ್ತಿ

Tumkurnews.in

ತುಮಕೂರು: ಇನ್ನರ್ ವೀಲ್ ಕ್ಲಬ್ ಆಫ್ ತುಮಕೂರು ಸೆಂಟ್ರಲ್‌ನ ಅಧ್ಯಕ್ಷೆ ಲೀಲಾವತಿ ಅಶೋಕ್ ಅವರು ಸಲ್ಲಿಸಿರುವ ಸಮಾಜ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ‘ಸಮಾಜ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ ಹಾಗೂ ಕಾವ್ಯಸ್ಪಂದನ ಪಬ್ಲಿಕೇಷನ್ಸ್ ಸಂಸ್ಥೆಯ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷೆ ಭದ್ರಾವತಿ ರಾಮಾಚಾರಿ ಅವರು, ಲೀಲಾವತಿ ಅಶೋಕ್ ಅವರು ಮುಂದೆಯೂ ಹೆಚ್ಚಿನ ಸಮಾಜ ಸೇವಾ ಕಾರ್ಯಗಳನ್ನು ಕೈಗೊಳ್ಳಲಿ ಎಂದು ಹಾರೈಸಿದರು.

ಲೀಲಾವತಿ ಅಶೋಕ್ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ತುಮಕೂರಿನ ಸ್ನೇಹಿತರು, ಹಿತೈಷಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *