ಪಿಎಚ್.ಡಿ. ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ಪಿಎಚ್.ಡಿ. ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

Tumkurnews.in

ತುಮಕೂರು : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ. (2026ರ ಜನವರಿ 1ರಂದು ಅಥವಾ ಅದರ ನಂತರ ಪ್ರಥಮ ವರ್ಷದ ಪಿಎಚ್.ಡಿ. ಅಧ್ಯಯನ ಪ್ರಾರಂಭಿಸಿರಬೇಕು) ಅಧ್ಯಯನ ಆರಂಭಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಸೌಲಭ್ಯ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು 2026-27ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ ಅಥವಾ ಅವುಗಳ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ. ಅಧ್ಯಯನ ಮಾಡುತ್ತಿರಬೇಕು.

ಅರ್ಜಿಯನ್ನು ಡಿಸೆಂಬರ್ 17ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in ಗೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 080-8050770004 / 0816-2955528 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಎಚ್.ಜಿ. ಸ್ವರ್ಣಲತಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *