ಜನಸ್ನೇಹಿ ಆಡಳಿತವೇ ಸರ್ಕಾರದ ಗುರಿ: ಡಾ. ಜಿ. ಪರಮೇಶ್ವರ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ ರಾಜಕೀಯ

ಜನಸ್ನೇಹಿ ಆಡಳಿತವೇ ಸರ್ಕಾರದ ಗುರಿ: ಡಾ. ಜಿ. ಪರಮೇಶ್ವರ
ಹೆಬ್ಬೂರು ನಾಡಕಚೇರಿಯ ನೂತನ ಅಟಲ್‌ಜೀ ಜನಸ್ನೇಹಿ ಕೇಂದ್ರ ಉದ್ಘಾಟನೆ

Tumkurnews.in

ತುಮಕೂರು: ಸರ್ಕಾರದ ಆಡಳಿತ ವ್ಯವಸ್ಥೆ ಜನಸ್ನೇಹಿಯಾಗಿರಬೇಕು. ಸಾರ್ವಜನಿಕರ ಸಮಸ್ಯೆಗಳು ಸುಲಭವಾಗಿ ಮತ್ತು ತ್ವರಿತವಾಗಿ ಬಗೆಹರಿಯುವಂತಿರಬೇಕು ಎಂಬ ಉದ್ದೇಶದಿಂದ ವಿವಿಧ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.
ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿಯ ನೂತನ ನಾಡಕಚೇರಿ ಕಟ್ಟಡದಲ್ಲಿ ಅಟಲ್‌ಜೀ ಜನಸ್ನೇಹಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಸೇವೆಗಳು ಜನರಿಗೆ ಸುಲಭವಾಗಿ ತಲುಪಬೇಕು. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇರಬಾರದು. ಈ ನಿಟ್ಟಿನಲ್ಲಿ ಪ್ರಜಾಸೇವೆ ಅಭಿಯಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹೆಬ್ಬೂರು ಪ್ರಮುಖ ಕೇಂದ್ರವಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರು ಕೃಷಿ ಉತ್ಪನ್ನಗಳ ಮಾರಾಟ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಇಲ್ಲಿಗೆ ಆಗಮಿಸುತ್ತಾರೆ. ಅವರಿಗೆ ಅಗತ್ಯವಿರುವ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ದೊರೆಯುವಂತಾಗಬೇಕು ಎಂದರು.
ಶಾಸಕ ಬಿ. ಸುರೇಶ್ ಗೌಡ ಮಾತನಾಡಿ, ಹೆಬ್ಬೂರು ಮತ್ತು ನಾಗವಲ್ಲಿ ಭಾಗದ ಕೆರೆಗಳಿಗೆ ಹೇಮಾವತಿ ನೀರು ಹರಿಸುವುದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ಭಾಗದ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಜಿ.ಚಂದ್ರಶೇಖರ್‌ಗೌಡ, ಬಿಎಚಿಟಿಸಿ ಉಪಾಧ್ಯಕ್ಷ ನಿಕೇತರಾಜ್ ಮೌರ್ಯ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಪಂ ಸಿಇಒ ಬಿ.ವಿ.ಅಶ್ವಿಜ, ತಹಸೀಲ್ದಾರ್ ರಾಜೇಶ್ವರಿ, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *