ನ. 28ರಂದು ಸೋರೇಕುಂಟೆಯಲ್ಲಿ ಪ್ರಜಾ ಸೇವಾ ಆಂದೋಲನ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ನ. 28ರಂದು ಸೋರೇಕುಂಟೆಯಲ್ಲಿ ಪ್ರಜಾ ಸೇವಾ ಆಂದೋಲನ

Tumkurnews.in

ತುಮಕೂರು: ತಾಲ್ಲೂಕಿನ ಬೆಳ್ಳಾವಿ ಹೋಬಳಿಯ ಸೋರೇಕುಂಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ನವೆಂಬರ್ 28ರಂದು ಬೆಳಿಗ್ಗೆ 10 ಗಂಟೆಗೆ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಪ್ರಜಾ ಸೇವಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆಗಳ ಬಗ್ಗೆ ಮನವಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಹಸೀಲ್ದಾರ್ ರಾಜೇಶ್ವರಿ ಪಿ.ಎಸ್. ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *