ರುಡ್‌ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ರುಡ್‌ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ ಆಹ್ವಾನ

Tumkurnews.in

ತುಮಕೂರು : ರುಡ್‌ಸೆಟ್ ಸಂಸ್ಥೆಯ ವತಿಯಿಂದ ಉಚಿತ ಫಾಸ್ಟ್ ಫುಡ್ ತಯಾರಿಕೆ ಹಾಗೂ ಕುರಿ ಸಾಕಾಣಿಕೆ ತರಬೇತಿ ನೀಡಲು ಅರ್ಹ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಂಸ್ಥೆಯು ನೀಡುವ 12 ದಿನಗಳ ಫಾಸ್ಟ್ ಫುಡ್ ತಯಾರಿಕೆ ತರಬೇತಿಯನ್ನು ನವೆಂಬರ್ 30ರಿಂದ ಹಮ್ಮಿಕೊಳ್ಳಲಾಗಿದೆ. ತರಬೇತಿಗೆ ಅರ್ಜಿ ಸಲ್ಲಿಸುವವರು 18ರಿಂದ 50 ವರ್ಷ ವಯೋಮಾನದವರಾಗಿರಬೇಕು.

ಅದೇ ರೀತಿ ಕುರಿ ಸಾಕಾಣಿಕೆ ತರಬೇತಿಯನ್ನು ಡಿಸೆಂಬರ್ 17ರಿಂದ ಹಮ್ಮಿಕೊಳ್ಳಲಾಗಿದೆ. ಈ ತರಬೇತಿಗೆ ಅರ್ಜಿ ಸಲ್ಲಿಸುವವರು 19ರಿಂದ 49 ವರ್ಷ ವಯೋಮಾನದವರಾಗಿರಬೇಕು.

ಅರ್ಜಿದಾರರು ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರಬೇಕು. ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 9740982585, 9380162042, 9241482541, 9481506564 ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕ ಗಿರಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *