ಇನ್ನರ್ ವೀಲ್ ಕ್ಲಬ್‌ನಿಂದ ಶ್ಲಾಘನೀಯ ಸಮಾಜಸೇವೆ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ಇನ್ನರ್ ವೀಲ್ ಕ್ಲಬ್‌ನಿಂದ ಶ್ಲಾಘನೀಯ ಸಮಾಜಸೇವೆ

Tumkurnews.in

ತುಮಕೂರು: ಸಮಾಜ ಸೇವೆಯಲ್ಲಿ ಇನ್ನರ್ ವೀಲ್ ಸಂಸ್ಥೆಯ ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡು, ನಿರ್ಗತಿಕ ಮಹಿಳೆಯರು ಹಾಗೂ ಅಸಹಾಯಕ ಮಕ್ಕಳ ನೆರವಿಗೆ ಧಾವಿಸಬೇಕು ಎಂದು ಇನ್ನರ್ ವೀಲ್ ತುಮಕೂರು ಜಿಲ್ಲಾ (319) ಅಧ್ಯಕ್ಷೆ ಇಶಾ ಸೇಠ್ ಕರೆ ನೀಡಿದರು.

ಇನ್ನರ್ ವೀಲ್ ಕ್ಲಬ್ ಆಫ್ ತುಮಕೂರು ಸಂಸ್ಥೆಯ ಅಧಿಕೃತ ಭೇಟಿಗಾಗಿ ತುಮಕೂರಿಗೆ ಆಗಮಿಸಿದ್ದ ಜಿಲ್ಲಾ ಅಧ್ಯಕ್ಷೆ ಇಶಾ ಸೇಠ್ ಅವರು, ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಸಿಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನರ್ ವೀಲ್ ಕ್ಲಬ್ ಆಫ್ ತುಮಕೂರು ಸೆಂಟ್ರಲ್‌ನ ಅಧ್ಯಕ್ಷೆ ಲೀಲಾವತಿ ಅಶೋಕ್ ಹಾಗೂ ಅವರ ತಂಡವು ಅತ್ಯುತ್ತಮವಾಗಿ ಸಮಾಜಮುಖಿ ಸೇವಾ ಕಾರ್ಯಗಳನ್ನು ನಿರ್ವಹಿಸುತ್ತಿದ್ದು, ಅವರ ಸೇವಾ ಕಾರ್ಯಗಳು ಶ್ಲಾಘನೀಯವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಅಸಹಾಯಕ ಮಹಿಳೆಯರು ಹಾಗೂ ಮಕ್ಕಳಿಗೆ ನೆರವು ನೀಡುವ ಮೂಲಕ ಸಮಾಜ ಸೇವಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಪ್ರತಿಭಾ ಶ್ರೀಧರ್ ಹಾಗೂ ಕ್ಲಬ್‌ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *