ದೊಡ್ಡಯ್ಯನಕಟ್ಟೆ ಪಾಳ್ಯದಲ್ಲಿ ಕನಕ ಜಯಂತಿ ಆಚರಣೆ
Tumkurnews.in
ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿಯ ದೊಡ್ಡಯ್ಯನಕಟ್ಟೆ ಪಾಳ್ಯದ ಗ್ರಾಮಸ್ಥರು ಕನಕದಾಸರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು.
ಈ ಸಂದರ್ಭದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರದೀಪ್ ಅವರು, ಕನಕದಾಸರು ಭಕ್ತಿ, ಸಮಾನತೆ, ಜಾತಿ ಪದ್ಧತಿ ವಿರೋಧ ಹಾಗೂ ಮಾನವೀಯತೆಯ ಸಾರವನ್ನು ಸಾರುವ ನೂರಾರು ಕೀರ್ತನೆಗಳನ್ನು ರಚಿಸುವ ಮೂಲಕ ಸಮಾಜದಲ್ಲಿನ ಜಾತಿ ಮತ್ತು ವರ್ಗಭೇದಗಳನ್ನು ವಿರೋಧಿಸಿದ್ದರು. ಎಲ್ಲರನ್ನೂ ಸಮಾನತೆಯ ದೃಷ್ಟಿಯಿಂದ ಕಾಣುವ ಮಹಾನ್ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸುತ್ತಿರುವುದು ಪುಣ್ಯದ ಕಾರ್ಯವಾಗಿದೆ ಎಂದು ಹೇಳಿದರು.
ಸಮಾಜದ ಎಲ್ಲ ವರ್ಗದ ಜನರನ್ನು ವಿಶ್ವಾಸದಿಂದ ಕಾಣುವ, ಅವರ ಸಮಸ್ಯೆಗಳಿಗೆ ಧ್ವನಿಯಾಗುವ ಜನಪ್ರತಿನಿಧಿಗಳ ಅಗತ್ಯವಿದೆ. ಈ ಬಾರಿ ತಾವು ಹೆಬ್ಬೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದು, ಗ್ರಾಮಸ್ಥರು ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ಈ ಹಿಂದೆ ನಾಗವಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯನಾಗಿ ಸೇವೆ ಸಲ್ಲಿಸಿದ್ದು, ಜನರ ವಿಶ್ವಾಸ ಗಳಿಸಿದ್ದೇನೆ. ಈ ಬಾರಿ ಜಿಲ್ಲಾ ಪಂಚಾಯಿತಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟು ಬೆಂಬಲಿಸಬೇಕು ಎಂದು ಕೋರಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಸಂಜಯ್, ಅರುಣ್, ಸುನಿಲ್, ದರ್ಶನ್ ಸೇರಿದಂತೆ ಹಲವು ಗ್ರಾಮಸ್ಥರು ಉಪಸ್ಥಿತರಿದ್ದರು.
