cool hit counter

ತುಮಕೂರು: ಏ.8ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಡಿಸಿ ವಿಶ್ವಾಸ

Tumkur News
Ashok R.P. is a passionate journalist and media professional known for his dedication to truthful, people-centric reporting. With a keen interest in regional news, public issues,...
1 Min Read

ಏ.8ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಡಿಸಿ ವಿಶ್ವಾಸ

Tumkur news
ತುಮಕೂರು: ಏ.8ರಂದು ನಡೆಯಲಿರುವ ಜನ ಸ್ಪಂದನ ಸಭೆಯಲ್ಲಿ ಗರಿಷ್ಠ ಮಟ್ಟದ ಪರಿಹಾರಗಳು ಸಿಗಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರ ಕೇಂದ್ರ ಗ್ರಂಥಾಲಯದಲ್ಲಿ ಶುಕ್ರವಾರ ಏಪ್ರಿಲ್ 8 ರಂದು ನಡೆಯಲಿರುವ ಜನ ಸ್ಪಂದನ ಕಾರ್ಯಕ್ರಮಕ್ಕಾಗಿ ಪೂರ್ವ ಸಿದ್ಧತೆ‌ಪರಿಶೀಲನೆ ನಡೆಸಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ ನಡೆಯಲಿದೆ ಎಂದರು.
ಈವರೆಗೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜನಸಂಪರ್ಕ ಸಭೆಯನ್ನು ಮಾಡಲಾಗಿದೆ. ಕಂದಾಯ, ಪಂಚಾಯತ್ ರಾಜ್ ಇಲಾಖೆ, ಆಹಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಬಂಧಿಸಿದ ಅಹವಾಲುಗಳನ್ನು ಸಾರ್ವಜನಿಕರು ನೀಡಿದ್ದಾರೆ. ಕೆಲವು ಪ್ರಕರಣಗಳಲ್ಲಿ ಸ್ಥಳದಲ್ಲೆ ಪರಿಹಾರಗಳನ್ನು‌ ನೀಡಲಾಗಿದೆ. ಕೆಲವು ಕಾಲಮಿತಿಯಲ್ಲಿ ಮಾಡ ಬೇಕಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಈಗಾಗಲೆ ಕೆಲವು ಬಗೆಹರಿದಿವೆ. ಈ ಪೈಕಿ ಕೆಲವು ಫಲಾನುಭವಿಗಳನ್ನು ಈ ಕಾರ್ಯಕ್ರಮಕ್ಕೆ ಕರೆತರುವಂತೆ ಆಯಾ ತಾಲೂಕು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲಾದ್ಯಂತ ಸುಮಾರು 2500 ಅಹವಾಲುಗಳು ಬಂದಿದ್ದು, ಈ ಕಾರ್ಯಕ್ರಮದಲ್ಲಿ ಶೇ.15ರಷ್ಟಾದರೂ ಪರಿಹಾರ ನೋಡಬೇಕೆಂಬ ಉದ್ದೇಶವಿದೆ ಎಂದರು.
ಸಾರ್ವಜನಿಕರು ಏ.8ರಂದು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಮಳಿಗೆಗಳನ್ನು ತೆರೆಯಲಾಗುವುದು. ಐಪಿಜಿಆರ್ ಎಸ್ ಸೌಲಭ್ಯ ಮಾಡಲಾಗಿದೆ. ಅಲ್ಲದೆ ಸಾರ್ವಜನಿಕರಿಗೆ ಕೇಂದ್ರ ಗ್ರಂಥಾಲಯದ ತಳಮಹಡಿಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್ ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತೆ ಬಿ.ಶುಭ ಉಪಸ್ಥಿತರಿದ್ದರು.

Share This Article
Follow:
Ashok R.P. is a passionate journalist and media professional known for his dedication to truthful, people-centric reporting. With a keen interest in regional news, public issues, politics, social developments, and ground-level reporting, he has built a reputation for delivering accurate and impactful stories that connect with the common people. He actively covers current affairs, civic issues, crime reports, political events, cultural programs, and human-interest stories with a commitment to ethical journalism. His reporting style focuses on clarity, credibility, and public awareness, making his work relatable and informative to readers across Karnataka. Ashok R.P. believes journalism is a powerful medium to raise public voice and strengthen democracy through responsible reporting and factual storytelling. Special Interests: * Regional & Political News * Public Interest Stories * Social Awareness Reporting * Ground Reality Journalism * Digital Media & News Publishing
Leave a Comment