ಬೆಂಗಳೂರು: ನಗರದ ವಿಜಯನಗರದಲ್ಲಿರುವ ಬೆಂಗಳೂರು ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡರ್ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ.
ಒಟ್ಟು 12 ಹುದ್ದೆಗಳು ಖಾಲಿ ಇದ್ದು, ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಯಾವುದೇ ಪದವಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದ್ದು, ಎಸ್ಎಸ್ಎಲ್ಸಿ ಹಂತದಲ್ಲಿ ಕನ್ನಡ ಭಾಷೆ ಓದಿರಬೇಕು. ಅಟೆಂಡರ್ ಹುದ್ದೆಗೆ ಎಸ್ಎಸ್ಎಲ್ಸಿ ಉತ್ತೀರ್ಣತೆ ಅರ್ಹತೆಯಾಗಿದೆ.
ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ₹49,050 ರಿಂದ ₹92,500ರವರೆಗೆ ಹಾಗೂ ಅಟೆಂಡರ್ ಹುದ್ದೆಗೆ ₹34,100 ರಿಂದ ₹67,600ರವರೆಗೆ ವೇತನ ನಿಗದಿಪಡಿಸಲಾಗಿದೆ. ಬ್ಯಾಂಕ್ ನಿಯಮಾವಳಿಗಳ ಪ್ರಕಾರ ಇತರೆ ಭತ್ಯೆಗಳೂ ದೊರೆಯಲಿವೆ.
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ವಯೋಮಿತಿ ನಿಗದಿಯಾಗಿದೆ. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ದೊರೆಯಲಿದೆ.
ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಮೇ 27ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
