cool hit counter

NEET | ನೀಟ್ ಯುಜಿ ಮರುಪರೀಕ್ಷೆ: ಮರುನೋಂದಣಿ ಬೇಡ, ಹೊಸ ಪ್ರವೇಶ ಪತ್ರ ನೀಡಲು ಎನ್‌ಟಿಎ ನಿರ್ಧಾರ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ವೈದ್ಯ, ಎಂಬಿಬಿಎಸ್ ವಿದ್ಯಾರ್ಥಿ, ಸಿಕಾರ್ ಪಿಜಿ ವಿದ್ಯಾರ್ಥಿಗಳ ಸಂಪರ್ಕ ಶಂಕೆಅಕ್ರಮ ಜಾಲದ ಮುಖ್ಯಸ್ಥ ಸೇರಿ 5 ರಾಜ್ಯಗಳಲ್ಲಿ 9 ಮಂದಿ ವಶಕ್ಕೆ

Webgauge India
1 Min Read

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ನೀಟ್ ಯುಜಿ ಪರೀಕ್ಷೆಯಲ್ಲಿ ತಾಂತ್ರಿಕ ಸಮಸ್ಯೆ ಹಾಗೂ ಅಸಮರ್ಪಕ ವ್ಯವಸ್ಥೆಯಿಂದಾಗಿ ಕೆಲವು ಪರೀಕ್ಷಾ ಕೇಂದ್ರಗಳ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ಈ ಕುರಿತು ಎನ್‌ಟಿಎ ಸ್ಪಷ್ಟನೆ ನೀಡಿದ್ದು, ಈಗಾಗಲೇ ನೀಟ್ ಪರೀಕ್ಷೆ ಬರೆದ ಅಭ್ಯರ್ಥಿಗಳು ಮರುನೋಂದಣಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದೆ. ಮರುಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳಿಗೆ ಹೊಸ ಪ್ರವೇಶ ಪತ್ರ (Admit Card) ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದೆ.

ಮರುಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಂದ ಯಾವುದೇ ಹೆಚ್ಚುವರಿ ಪರೀಕ್ಷಾ ಶುಲ್ಕ ವಸೂಲಿ ಮಾಡುವುದಿಲ್ಲ. ಈಗಾಗಲೇ ಪಾವತಿಸಿದ ಪರೀಕ್ಷಾ ಶುಲ್ಕವನ್ನು ಹಿಂದಿರುಗಿಸುವುದಾಗಿ ಎನ್‌ಟಿಎ ತಿಳಿಸಿದೆ.

ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ವಿಳಂಬ, ತಾಂತ್ರಿಕ ತೊಂದರೆ ಹಾಗೂ ಪರೀಕ್ಷಾ ಸಮಯ ವ್ಯತ್ಯಯ ಉಂಟಾದ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮರುಪರೀಕ್ಷೆಯ ದಿನಾಂಕ, ಪ್ರವೇಶ ಪತ್ರ ಹಾಗೂ ಪರೀಕ್ಷಾ ಕೇಂದ್ರಗಳ ಮಾಹಿತಿ ಅಧಿಕೃತ ವೆಬ್‌ಸೈಟ್ ಮೂಲಕ ಶೀಘ್ರದಲ್ಲೇ ಪ್ರಕಟವಾಗಲಿದೆ.

Share This Article
Leave a Comment