Ad image

ತುಮಕೂರು: ಉಚಿತ ಬ್ಯೂಟಿಷಿಯನ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

Ashok RP
1 Min Read

ಉಚಿತ ಬ್ಯೂಟಿಷಿಯನ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

Tumkur news
ತುಮಕೂರು: ಬೆಂಗಳೂರಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಧಾರವಾಡದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಹಾಗೂ ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯರಿಗಾಗಿ 24 ದಿನಗಳ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಉದ್ಯಮ ಕುರಿತ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತಾ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ ಮಾರುಕಟ್ಟೆ ಮಾಹಿತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು.
ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿದ್ದು, 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಅರ್ಜಿ ಸಲ್ಲಿಸಲು ಮೇ 5 ಕೊನೆಯ ದಿನವಾಗಿದ್ದು, ತರಬೇತಿಯು ಮೇ 10 ರಿಂದ ಆರಂಭವಾಗಲಿದೆ. ತರಬೇತಿ ಮುಗಿದ ನಂತರ ಉದ್ಯಮ ಪ್ರಾರಂಭಿಸಲು ಬೆಂಬಲ ಸೇವೆ ನೀಡಲಾಗುವುದು.
ಆಸಕ್ತರು ಜಿಲ್ಲಾ ಕೈಗಾರಿಕಾ ಕೇಂದ್ರ, ರಿಸರ್ವ್ ಪೊಲೀಸ್ ಮೈದಾನದ ಎದುರು, ಎಸ್.ಐ.ಟಿ.ಬಸ್. ನಿಲ್ದಾಣ, ತುಮಕೂರು ಕಚೇರಿಯಲ್ಲಿ ಅರ್ಜಿಯನ್ನು ಪಡೆಯಬಹುದು. ಮಾಹಿತಿಗೆ ದೂರವಾಣಿ ಸಂಖ್ಯೆ:
7022746755 ಸಂಪರ್ಕಿಸಬೇಕೆಂದು ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *