ಕಲ್ಪತರು ನಾಡಿನಲ್ಲಿ ಧೂಳೆಬ್ಬಿಸಿದ ಸಿಎಂ, ಡಿಸಿಎಂ
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಜಿಲ್ಲೆಗೆ ಮೊದಲ ಭೇಟಿ
Tumkur news
ತುಮಕೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಶನಿವಾರ ಜಿಲ್ಲೆಗೆ ಆಗಮಿಸಿ ಸಂಚಲನ ಸೃಷ್ಟಿಸಿದರು.
ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಜಿಲ್ಲೆಯನ್ನು ಪ್ರವೇಶಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಶಾಸಕ ಡಾ. ಎಚ್.ಡಿ ರಂಗನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕುಣಿಗಲ್’ನಲ್ಲಿ ಭರ್ಜರಿಯಾಗಿ ಸ್ವಾಗತಿಸಿದರು. ಬಳಿಕ ತುರುವೇಕೆರೆ ತಾಲ್ಲೂಕಿನ ಮಲ್ಲಾಘಟ್ಟ ಕೆರೆಗೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್, ಅಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಬಳಿಕ ತಿಪಟೂರು ತಾಲೂಕಿನ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.
ಮತ್ತೊಂದೆಡೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರಗೆ ತುಮಕೂರು ನಗರದಲ್ಲಿ ಕೈ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ದೊರೆಯಿತು.
