ಊರ್ಡಿಗೆರೆಯಲ್ಲಿ ಸೆ.26ರಂದು ಪ್ರಜಾಸೇವಾ ಆಂದೋಲನ
Tumkurnews.in
ತುಮಕೂರು: ತಾಲ್ಲೂಕಿನ ಊರ್ಡಿಗೆರೆ ಗ್ರಾಮದ ಸೆಂಟ್ರಲ್ ಸ್ಕೂಲ್ ಆವರಣದಲ್ಲಿ ಸೆಪ್ಟೆಂಬರ್ 26ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ರಾಜೇಶ್ವರಿ ತಿಳಿಸಿದ್ದಾರೆ.
ಕಾರ್ಯಕ್ರಮವು ಶಾಸಕ ಬಿ. ಸುರೇಶ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿ, ಸರ್ಕಾರಿ ಯೋಜನೆ ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಲಿದ್ದಾರೆ. ಸಾರ್ವಜನಿಕರಿಂದ ಸ್ವೀಕರಿಸುವ ಅಹವಾಲು ಅರ್ಜಿ/ಕುಂದು-ಕೊರತೆಗಳನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಸ್ಥಳದಲ್ಲಿಯೇ ನೋಂದಾಯಿಸಿ ಸ್ವೀಕೃತಿ ನೀಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕೋರಿದ್ದಾರೆ.
