ಬೆಂಗಳೂರು; ಶಾಲಾ ಪಠ್ಯದಿಂದ ಭಗತ್ ಸಿಂಗ್ ಗದ್ಯ ಕೈ ಬಿಡಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪಠ್ಯ ಪುಸ್ತಕ ಸಂಘ ಸ್ಪಷ್ಟನೆ ನೀಡಿದೆ.
ಶಾಲಾ ಮಕ್ಕಳೊಂದಿಗೆ ಸಿಎಂ ಸಂವಾದ; ಮಕ್ಕಳು ಏನೇನು ಪ್ರಶ್ನೆ ಕೇಳಿದ್ದಾರೆ ನೋಡಿ
‘ಸಮಾಜ ವಿಜ್ಞಾನ ಹಾಗೂ ಭಾಷಾ ಪಠ್ಯ ಪುಸ್ತಕಗಳಲ್ಲಿದ್ದ ಸೂಕ್ಷ್ಮ ವಿಚಾರಗಳನ್ನು ಪರಿಶೀಲಿಸಿ, ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿ ನೇಮಿಸಲಾಗಿತ್ತು. ಈ ಸಮಿತಿಯು 6ರಿಂದ 10ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳು ಹಾಗೂ 1ರಿಂದ 10ನೇ ತರಗತಿ ಕನ್ನಡ ಭಾಷಾ ಪಠ್ಯ ಪುಸ್ತಕಗಳನ್ನು ಪರಿಷ್ಕರಿಸಿರುತ್ತಾರೆ. 10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠವನ್ನು ಕೈ ಬಿಟ್ಟಿರುವುದಿಲ್ಲ. ಪರಿಷ್ಕರಿಸಿರುವ 10ನೇ ತರಗತಿ ಪ್ರಥಮ ಭಾಷಾ ಕನ್ನಡ ಪಠ್ಯ ಪುಸ್ತಕವು ಪ್ರಸ್ತುತ ಮುದ್ರಣ ಹಂತದಲ್ಲಿದೆ ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ರಾಜ್ಯದಲ್ಲಿ 2 ವರ್ಷದ ನಂತರ ಶಾಲೆಗಳು ಪ್ರಾರಂಭ; ತುಮಕೂರಿನಲ್ಲಿ ಸಂತಸ ಹಂಚಿಕೊಂಡ ಸಿಎಂ
+ There are no comments
Add yours