Tumkurnews
ತುಮಕೂರು; ಇಂಗ್ಲಿಷ್ ಓದಲು ಕಷ್ಟವಾಗುತ್ತದೆ ಎಂದು ಬಾಲಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
7ನೇ ತರಗತಿ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಅಘಾತಕಾರಿ ಘಟನೆ ಇದಾಗಿದ್ದು, ತುಮಕೂರಿನ ಊರ್ಡಿಗೆರೆಯಲ್ಲಿ ಘಟನೆ ನಡೆದಿದೆ.
ಊರ್ಡಿಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿರುವ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ವಿದ್ಯಾರ್ಥಿ ಬಸ್ ಪಾಸ್ ಗೆ ಏನೇನು ದಾಖಲೆಗಳು ಬೇಕು?; ಇಲ್ಲಿದೆ ಮಾಹಿತಿ
ಇಂಗ್ಲಿಷ್ ಓದಲು ಕಷ್ಟವಾಗುತ್ತದೆ ಎಂದು ಹೆದರಿ ಶಾಲೆಗೆ ಹೋಗುವುದಿಲ್ಲ ಎಂದು ಬಾಲಕ ಮನೆಯಲ್ಲಿ ಹಠ ಮಾಡಿದ್ದನು. ಬಾಲಕನ ಮನವೊಲಿಸಿದ್ದ ಪೋಷಕರು ಶಾಲೆಗೆ ಕಳುಹಿಸಿದ್ದರು. ಆದರೆ ಧೃತಿಗೆಟ್ಟ ಬಾಲಕ ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಶಾಲೆಗೆ ಹೋಗುವುದಿಲ್ಲ ಎಂದು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿದ ಬಾಲಕ ಅಸ್ವಸ್ಥನಾಗಿ ಮನೆಯಲ್ಲಿ ಕುಸಿದು ಬಿದ್ದಿದ್ದನು. ಕೂಡಲೇ ಪೋಷಕರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಜಿಲ್ಲಾಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ.
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್!; ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
ತುಮಕೂರು ನಗರದ ಕೋತಿ ತೋಪು ಮೂಲದ ಸೋಮಶೇಖರ್, ಜಯಮ್ಮ ದಂಪತಿಯ ಮಗ ಇವನಾಗಿದ್ದು, ಕೂಲಿ ಕೆಲಸ ಮಾಡುತ್ತಾ ಜೀವನ ನಡೆಸುತ್ತಿರುವ ಸೋಮಶೇಖರ್ ದಂಪತಿಗಳು ಮಗನ ಕೃತ್ಯದಿಂದ ಕಂಗಲಾಗಿದ್ದಾರೆ.
ಕೂಲಿ ಕೆಲಸ ನಿಮಿತ್ತ ಊರ್ಡಿಗೆರೆ ಗ್ರಾಮಕ್ಕೆ ದಂಪತಿ ವಲಸೆ ಬಂದಿದ್ದಾರೆ. ತುಮಕೂರಿನ ಕೋತಿತೋಪು ಸರ್ಕಾರಿ ಶಾಲೆಯಲ್ಲಿ 6ನೇ ತರಗತಿವರೆಗೂ ಬಾಲಕ ವಿದ್ಯಾಭ್ಯಾಸ ಮಾಡಿದ್ದು, 7ನೇ ತರಗತಿಗೆ ಊರ್ಡಿಗೆರೆಯಲ್ಲಿ ಶಾಲೆಗೆ ಸೇರಿಸಲಾಗಿತ್ತು. ಮೇ 16ನೇ ತಾರೀಕಿನಿಂದ ಶಾಲೆ ಶುರುವಾಗಿದ್ದು, ಬಾಲಕ ಒಂದೆರಡು ದಿನ ಶಾಲೆಗೆ ಸರಿಯಾಗಿಯೇ ಹೋಗಿದ್ದನು.
ಬಳಿಕ ಶಾಲೆಗೆ ಹೋಗುವುದಿಲ್ಲ ಎಂದು ಹಠ ಮಾಡಿದ್ದಾನೆ.
ಬಿಇಒ ಭೇಟಿ; ಬಾಲಕನ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಬಿಇಒ ಹನುಮನಾಯಕ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಬಾಲಕನ ಆರೋಗ್ಯ ವಿಚಾರಿಸಿದ್ದಾರೆ.
ತುಮಕೂರಿನ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
+ There are no comments
Add yours