ತುಮಕೂರು ಶಿಕ್ಷಣ ಇಲಾಖೆಯಲ್ಲಿ ಉದ್ಯೋಗ; ಇಂದೇ ಅರ್ಜಿ ಸಲ್ಲಿಸಿ

1 min read

 

Tumkurnews
ತುಮಕೂರು; ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಯ ತುಮಕೂರು(ದ) ಜಿಲ್ಲಾ ವ್ಯಾಪ್ತಿಯ 6 ತಾಲ್ಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ. (ಪ್ರಾಥಮಿಕ)-04 ಮತ್ತು ಬಿ.ಐ.ಇ.ಆರ್.ಟಿ.(ಪ್ರೌಢ)-12 ಹುದ್ದೆಗಳನ್ನು ನೇರ ಗುತ್ತಿಗೆ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದೆ.

ತುಮಕೂರಿನ ವಿವಿಧ ನ್ಯಾಯಾಲಯಗಳಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಆರಂಭ
ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಆರ್.ಸಿ.ಐ ನಿಯಮದಂತೆ ಪ್ರಾಥಮಿಕ ಶಾಲೆಗಳಿಗೆ ವಿಶೇಷ ಡಿ.ಇಡಿ, ಎಂ.ಸಿ.ಟಿ.ಟಿ. ಮತ್ತು ಆಡನ್‍ಕೋರ್ಸ್ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಮತ್ತು ಪ್ರೌಢಶಾಲೆಗಳಿಗೆ ವಿಶೇಷ ಬಿ.ಇಡಿ ಪದವಿಯ ವಿದ್ಯಾರ್ಹತೆ ಹೊಂದಿರುವವರನ್ನು 2022-23ನೇ ಸಾಲಿಗೆ ನೇರ ಗುತ್ತಿಗೆ ಮೂಲಕ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ಮತದಾರರ ಗುರುತಿನ ಚೀಟಿ ವಿತರಣೆಗೆ ಗ್ರಹಣ; ಕಾರಣ ಕ್ಷುಲ್ಲಕ!
ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಅಂಕಪಟ್ಟಿ, ಕಾನ್ವೋಕೇಷನ್ ಪ್ರಮಾಣ ಪತ್ರ, ಆರ್.ಸಿ.ಐ. ನೋಂದಣಿ ಪ್ರಮಾಣ ಪತ್ರದೊಂದಿಗೆ ಸ್ವವಿವರವುಳ್ಳ ಮಾಹಿತಿಯನ್ನು ಜೂನ್ 4ರೊಳಗಾಗಿ ಮುದ್ದಾಂ ಅಥವಾ ಅಂಚೆ ಮೂಲಕ ಉಪನಿರ್ದೇಶಕರು ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಮಗ್ರ ಶಿಕ್ಷಣ ಕರ್ನಾಟಕ, ಸಾ.ಶಿ.ಇಲಾಖೆ, ಡಾ. ರಾಧಾಕೃಷ್ಣನ್ ರಸ್ತೆ, ಎಸ್.ಎಸ್.ಪುರಂ, ತುಮಕೂರು-572102 ಈ ವಿಳಾಸಕ್ಕೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ. 9448999407ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿ ಬಸ್ ಪಾಸ್ ಗೆ ಏನೇನು ದಾಖಲೆಗಳು ಬೇಕು?; ಇಲ್ಲಿದೆ ಮಾಹಿತಿ

About The Author

You May Also Like

More From Author

+ There are no comments

Add yours