Tumkur News
ತುಮಕೂರು: ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆಯಲು ಬರುವ ಸಾರ್ವಜನಿಕರಿಗೆ ಬಿಪಿಎಲ್ ಅಥವಾ ಎಪಿಎಲ್ ಪಡಿತರ ಉಳ್ಳವರಿಗೆ ಕಡ್ಡಾಯಗೊಳಿಸಿ ಅಯುಷ್ಮಾನ್ ಆರೋಗ್ಯ ಕಾರ್ಡ್ ಗಳನ್ನು ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದರು.
ತುಮಕೂರು ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 111 ಬಾಲೆಯರಿಗೆ ಕಂಕಣ ಕಂಟಕ!
ಜಿಲ್ಲೆಯಲ್ಲಿ 28 ಲಕ್ಷ ಕಾರ್ಡುಗಳನ್ನು ನೀಡುವ ಗುರಿಯನ್ನು ಹೊಂದಿದ್ದು, ಈವರೆಗೆ 7.4 ಲಕ್ಷ ಕಾರ್ಡುಗಳನ್ನು ವಿತರಿಸಲಾಗಿದೆ. ಇದೇ ಜೂ.8 ರಿಂದ 14 ರವರೆಗೆ ಅಯುಷ್ಮಾನ್ ಕಾರ್ಡ್ ಗಳನ್ನು ನೀಡಲು ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಒಂದು ತಾಲ್ಲೂಕಿಗೆ 20 ಸಾವಿರ ಕಾರ್ಡುಗಳನ್ನು ವಿತರಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳು, ಸಾಮಾನ್ಯ ಸೇವಾ ಕೇಂದ್ರಗಳು, ಸೇವಾಸಿಂಧು ಕೇಂದ್ರಗಳಲ್ಲಿ ಆದ್ಯತೆಯ ಮೇರೆಗೆ ಕಾರ್ಡ್ ಗಳನ್ನು ವಿತರಿಸಿ ನಿಗಧಿಪಡಿಸಿರುವ ಗುರಿಯನ್ನು ತಲುಪಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತುಮಕೂರಿನಲ್ಲಿ 120 ಮಹಿಳಾ ದೌರ್ಜನ್ಯ ಪ್ರಕರಣಗಳು!
ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಯಲು ನಡೆದಿರುವ ಎಲ್ಲಾ ಸಿದ್ಧತೆಗಳು ಮುಂದುವರಿಯಬೇಕು. ಲಸಿಕೆಯನ್ನು ನೀಡುವಲ್ಲಿ ಯಾವುದೇ ರೀತಿಯ ವಿಳಂಬ ನೀತಿ ಬೇಡ. ಬಾಕಿಯಿರುವ ಎಲ್ಲ ವಯೋಮಾನದವರ ಲಸಿಕೆಯನ್ನು ಶೀಘ್ರವಾಗಿ ಶೇ.100 ರಷ್ಟು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
                                            
                                            
                                            
                                            
                                            
                                            
                                            
                                            
                                            
                                    
                                    
                                    
                                    


                                    
                                    
                                    
+ There are no comments
Add yours